ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಕ್ಲೀನ್‌ಚಿಟ್‌ ಪಡೆದ ಬಳಿಕ ನಾಡದೇವಿಗೆ ನಮಿಸಿದ ಈಶ್ವರಪ್ಪ

|
Google Oneindia Kannada News

ಮೈಸೂರು, ಜುಲೈ 22: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಶುಕ್ರವಾರ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ಆಶೀರ್ವಾದ ಪಡೆದರು.

ಶುಕ್ರವಾರ ಕುಟುಂಬ ಸಮೇತರಾಗಿ ಈಶ್ವರಪ್ಪ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಇಂದು ಆಷಾಢದ ಕೊನೆ ಶುಕ್ರವಾರ. ಈ ಹಿನ್ನಲೆಯಲ್ಲಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ದರ್ಶನ ಪಡೆದು ಆಶೀರ್ವಾದ ಪಡೆದರು. ಈ ವೇಳೆ ಈಶ್ವರಪ್ಪರವರ ಜೊತೆ ಪತ್ನಿ ಜಯಲಕ್ಷ್ಮೀ ಈಶ್ವರಪ್ಪ, ಪುತ್ರ ಕೆ.ಈ. ಕಾಂತೇಶ್ ಮತ್ತು ಕುಟುಂಬ ಸದಸ್ಯರು ಇದ್ದರು.

Breaking: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್‌Breaking: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್‌

ಗುರುವಾರ ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ವಿಶೇಷ ಪೂಜೆ ನಡೆದಿತ್ತು. ಈ ವೇಳೆ ಈಶ್ವರಪ್ಪ ಪೂಜೆಯಲ್ಲಿ ಪಾಲ್ಗೊಂಡಿದ್ದರು.ಇಂದು ಮೈಸೂರಿಗೆ ಭೇಟಿ ನೀಡಿದ್ದಾರೆ.

Former minister KS Eshwarappa Visits Mysuru Chamundeshwari temple

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಟೌನ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧ ಪೊಲೀಸರು ಬಿ-ರಿಪೋರ್ಟ್‌ ಸಲ್ಲಿಕೆ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಈಶ್ವರಪ್ಪ, 'ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದ ಕಾರಣ ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ನೀಡಿದ್ದೆ. ಈಗ ಆ ಮುಜಗರ ನಿವಾರಣೆಯಾಗಿದೆ. ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದರೂ ಕಾಂಗ್ರೆಸ್‌ನವರು ಟೀಕಿಸುತ್ತಿದ್ದಾರೆ. ಇದರಿಂದ ನನಗೆ ಬೇಸರವಿದೆ" ಎಂದರು.

Former minister KS Eshwarappa Visits Mysuru Chamundeshwari temple

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಉಡುಪಿಯ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮೊದಲು ಸಂತೋಷ್ ಸ್ನೇಹಿತರಿಗೆ ಸಂದೇಶ ಕಳಿಸಿದ್ದು, ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಸಂದೇಶ ಕಳುಹಿಸಿದ್ದರು. ಸಂದೇಶದಲ್ಲಿ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್‌ ಆರೋಪ ಮಾಡಲಾಗಿತ್ತು.

ಪ್ರಕರಣದ ಬಳಿಕ ವಿರೋಧ ಪಕ್ಷಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಲಾಗಿತ್ತು. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.

Recommended Video

ಉದ್ಘಾಟನೆಯಾದ ಒಂದೇ ವಾರಕ್ಕೆ ಬುಂದೇಲ್ ಖಂಡ್ ಎಕ್ಸ್ಪ್ರೆಸ್ ವೇ ಕುಸಿತ; BJPಗೆ ಪ್ರತಿಪಕ್ಷಗಳ ತರಾಟೆ | Oneindia

English summary
Former minister and Bjp leader K. S. Eshwarappa visited Chamundeshwari temple in Mysuru with family members on Friday. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X