Get Updates
Get notified of breaking news, exclusive insights, and must-see stories!

ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಿದೆ : ಶ್ರೀನಿವಾಸ್ ಪ್ರಸಾದ್

ಮೈಸೂರು, ಮೇ 11: ನಮ್ಮ ರಾಜ್ಯದಲ್ಲಿ ಬರ ಇದ್ದರೂ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾತ್ರ ಕುಟುಂಬ ಸಮೇತ ದೇವಾಲಯ, ರೆಸಾರ್ಟ್ ಮೊರೆ ಹೋಗಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ದೇವಾಲಯದಲ್ಲಿ ಹೋಮ ಹವನ ಎಂಬುದು ಅವರ ವೈಯಕ್ತಿಕ ವಿಚಾರ. ಜನರು ಅವರಿಗೆ ಒಳ್ಳೆಯ ಅವಕಾಶವನ್ನು ನೀಡಿದ್ದಾರೆ. ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳುವುದು ಬಿಟ್ಟು ರೆಸಾರ್ಟ್, ದೇವಾಲಯದ ಮೊರೆ ಹೋಗುತ್ತಿದ್ದಾರೆ. ಪ್ರಧಾನಿ ಹುದ್ದೆಯಲ್ಲಿದ್ದ ದೇವೇಗೌಡರು ತಮ್ಮ ಮಗನಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಈ ಫಲಿತಾಂಶ ಬರುವವರೆಗೂ ಏನಾಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಫಲಿತಾಂಶದ ನಂತರವಷ್ಟೇ ರಾಜ್ಯದಲ್ಲಿ ಏನಾಗಬಹುದೆಂದು ಊಹಿಸಬಹುದು. ಕೇಂದ್ರದಲ್ಲಿ ಅತಂತ್ರ ಸರ್ಕಾರ ನಿರ್ಮಾಣವಾಗಬಹುದು.ಆದರೆ ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರಬೇಕು. ಮೋದಿಯವರೇ ಪ್ರಧಾನಮಂತ್ರಿ ಆಗಬೇಕು. ರಾಜ್ಯದಲ್ಲೂ ಕೂಡ ಬಿಜೆಪಿ ಬಗ್ಗೆ ಜನರಿಗೆ ವಿಶ್ವಾಸವಿದೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

Former minister Shrinivas Prasad slams HD Kumarswamy

ಇನ್ನು ರಾಜೀವ್ ಗಾಂಧಿಯವರ ಬಗ್ಗೆ ಮೋದಿ ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಶ್ರೀನಿವಾಸ್ ಪ್ರಸಾದ್ ಖಂಡಿಸಿದ್ದರು. ಈ ಹೇಳಿಕೆ ಕುರಿತು ಮೋದಿ ಅವರ ನಿಲುವು ಸರಿಯಿಲ್ಲ ಎಂದು ತಿಳಿಸಿದ್ದರು. ಇದೀಗ ಈ ಹೇಳಿಕೆ ಅವರಿಗೆ ಬಿಜೆಪಿ ಪಾಳಯದಲ್ಲಿ ಡ್ಯಾಮೇಜ್ ಆಗಲಿದೆಯಾ ಎಂಬ ಮಾತು ಕೇಳಿಬರುತ್ತಿದೆ.

ಒಂದು ವೇಳೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಶ್ರೀನಿವಾಸ್ ಪ್ರಸಾದ್ ಗೆದ್ದರೆ ಪ್ರಸಾದ್ ಗೆ ಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಮಾತುಗಳು ಸುಳ್ಳಾಗುವ ಸಾಧ್ಯತೆ ಹೆಚ್ಚಿದೆ. ಶ್ರೀನಿವಾಸ್ ಪ್ರಸಾದ್ ಮೇಲೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಕಣ್ಣಿರಿಸಿದ್ದಾರೆ. ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಅವರ ಹೇಳಿಕೆಗಳನ್ನು ಶ್ರೀನಿವಾಸ್ ಪ್ರಸಾದ್ ವಿರೋಧಿಸಿದ್ದನ್ನು ಸ್ಮರಿಸಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+