• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಹಿರಿಯ ರಾಜಕಾರಣಿ ಸತ್ಯನಾರಾಯಣಪ್ಪ ನಿಧನ

|

ಮೈಸೂರು, ಜೂನ್ 7: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಸತ್ಯನಾರಾಯಣಪ್ಪ ಕಳೆದ ರಾತ್ರಿ ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ.

ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಅವರು ಮೈಸೂರು ತಾಲ್ಲೂಕಿನ ಇಲವಾಲದಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಪತ್ನಿ ನಿರ್ಮಲಾ, ಇಬ್ಬರು ಪುತ್ರರಾದ ಜಿಪಂ ಸದಸ್ಯ ಅರುಣ್, ಜಗದೀಶ್, ಪುತ್ರಿ ಸುನಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿದ್ದ ಸತ್ಯನಾರಾಯಣಪ್ಪ, 2008ರ ವಿಧಾನಸಭಾ ಚುನಾವಣೆಯಲ್ಲಿ, ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾಗಿದ್ದರು. ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದ ಇವರು ಸ್ಥಳೀಯವಾಗಿ ಸತ್ಯಪ್ಪ ಎಂತಲೇ ಗುರುತಿಸಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಸತ್ಯನಾರಾಯಣ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

English summary
Senior Congress leader, former MLA Satyanarayanappa died in Mysore last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X