• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 12: ಕಟ್ಟಡ ಕಾರ್ಮಿಕರಿಗೆ ರಾಜ್ಯವ್ಯಾಪಿ ಸಂಚರಿಸಲು ಉಚಿತವಾಗಿ ಬಸ್‌ ಪಾಸ್ ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಸ್ ‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದರು.

ಸೋಮವಾರ ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗದ ಕೆಎಸ್ ‌ಆರ್‌ಟಿಸಿ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೈಸೂರು ಜಿಲ್ಲೆಯಲ್ಲಿ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಲಾಗುವುದು. ಪ್ರತಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಿದ್ದೇವೆ" ಎಂದು ಮಾಹಿತಿ ನೀಡಿದರು.

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗದ ಸಮೀಕ್ಷೆಗೆ ಒಪ್ಪಿಗೆ

ಲಾಕ್‌ಡೌನ್‌ನಿಂದಾಗಿ ಮೈಸೂರು ವಿಭಾಗಕ್ಕೆ 70 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದಲ್ಲಿ 1,600 ಕೋಟಿ ರೂ. ನಷ್ಟವಾಗಿದೆ. ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅಗತ್ಯತೆ ಅನುಸಾರವಾಗಿ ಮೈಸೂರು ಗ್ರಾಮಾಂತರ ಭಾಗದಿಂದ 70 ಹಾಗೂ ನಗರ ವಿಭಾಗದಿಂದ 20 ಕೆಎಸ್ ‌ಆರ್‌ಟಿಸಿ ಬಸ್‌ ಸೇವೆ ಕಲ್ಪಿಸಲಾಗುವುದು. ಲಾಭದ ಹಿತಾಸಕ್ತಿಗಿಂತ ಮುಖ್ಯವಾಗಿ ಸಾರ್ವಜನಿಕರ ಸೇವೆ ಅಗತ್ಯವಾಗಿದೆ" ಎಂದು ಹೇಳಿದರು.

ಕೋವಿಡ್-19ನಿಂದ ತತ್ತರಿಸಿ ಹೋಗಿದ್ದ ಕೂಲಿ ಕಾರ್ಮಿಕರಿಗೆ ನೆರವಾಗಲೆಂದು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳಸಿ ತಮ್ಮ ಕೆಲಸ ಕಾರ್ಯಗಳಿಗೆ ಉಚಿತವಾಗಿ ತೆರಳಲು ಸಹಕಾರಿಯಾಗಲಿದೆ. ಮೈಸೂರು ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ವಿಭಾಗಗಳನ್ನು ಒಂದುಗೂಡಿಸಲಾಗುವುದು. ಖಾಸಗಿ ಬಸ್‌ಗಳು ಹೆಚ್ಚಾಗಿ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇದರ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದರು.

English summary
Free bus passes would be given to building construction labours informed MLA and KSRTC chairman M. Chandrappa toady in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X