ಕನ್ನಡ ಸಮ್ಮೇಳನದ ಪ್ರತಿನಿಧಿಗಳಿಗೆ ಉಚಿತ ಮೃಗಾಲಯ ನೋಡುವ ಭಾಗ್ಯ

ಮೈಸೂರು, ನವೆಂಬರ್ 24 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಸಾಹಿತ್ಯ ಸಮ್ಮೇಳನಕ್ಕೆ ಹೆಸರು ನೋಂದಾಯಿಸಿದವರಿಗೆ ಚಾಮರಾಜೇಂದ್ರ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಮೈಸೂರು ಮೃಗಾಲಯದ 125ನೇ ವರ್ಷಾಚರಣೆ ನಡೆಸಲಾಗುತ್ತಿದೆ. ಇದೇ ವೇಳೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವೂ ನಡೆಯುತ್ತಿದೆ. ಇದರಿಂದ ಕನ್ನಡ ಸಮ್ಮೇಳನಕ್ಕೆ ಹೆಸರು ನೋಂದಾಯಿಸಿರುವ ಕನ್ನಡಾಭಿಮಾನಿಗಳು, ಸಾಹಿತಿ, ಕವಿಗಳು, ಲೇಖಕರು ಭಾಗವಹಿಸುತ್ತಿರುವ ಎಲ್ಲರಿಗೂ ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 24ರಿಂದ 26ರವರೆಗೆ ಉಚಿತ ಪ್ರವೇಶ ಕಲ್ಪಿಸಿಕೊಡಲಾಗಿದೆ.

ಚಿತ್ರಗಳು : ಸಾಂಸ್ಕೃತಿಕ ನಗರಿಯಲ್ಲಿ ಅಕ್ಷರ ಜಾತ್ರೆ

Free entry to Mysuru zoo who registered a name for Kannada Sahitya Sammelana

ಈ ಕುರಿತು ಮಾತನಾಡಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಗೆ ವೀರೆಶ್ ಅವರು ಕನ್ನಡದ ಹಬ್ಬ ಮೈಸೂರಿನಲ್ಲಿ ನಡೆಯುತ್ತಿರುವುದು ಸಂತಸ ತಂದಿದ್ದು, ಈ ಹಿನ್ನಲೆಯಲ್ಲಿ ಸಾಹಿತ್ಯಾಸಕ್ತರಿಗೆ ಮೃಗಾಲಯದೊಳಗೆ ವಿಶೇಷ ಉಚಿತ ಪ್ರವೇಶ ಸೌಲಭ್ಯ ಕಲ್ಪಿಸಾಗಿದೆ.

ಆಸಕ್ತರು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಮೃಗಾಲಯವನ್ನು ಕಣ್ತುಂಬಿಕೊಳ್ಳುಬಹುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+