ಗೀತಾಮಹದೇವಪ್ರಸಾದ್ ಮಂತ್ರಿಯಾದರೂ ಅಚ್ಚರಿಯಿಲ್ಲ : ಡಾ.ಪರಮೇಶ್ವರ್
ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಾಸ್ ಗೆಲುವು ಸಾಧಿಸಿದರೆ ಅವರನ್ನು ಮಂತ್ರಿಯನ್ನಾಗಿ ಮಾಡಿದರೂ ಅಚ್ಚರಿಯಿಲ್ಲ ಎಂದು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮೈಸೂರು, ಏಪ್ರಿಲ್ 4 : ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಾಸ್ ಗೆಲುವು ಸಾಧಿಸಿದರೆ ಅವರನ್ನು ಮಂತ್ರಿಯನ್ನಾಗಿ ಮಾಡಿದರೂ ಅಚ್ಚರಿಯಿಲ್ಲ ಎಂದು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಉಪಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಬಹಿರಂಗ ಸಭೆಯಲ್ಲಿ ಮಾತನಾಡಿ, 'ಲಿಂಗಾಯಿತರಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿದ್ದರೆ ಮಹದೇವಪ್ರಸಾದ್ ಗೆ ಅವಕಾಶವಿತ್ತು ಎಂದರಲ್ಲದೆ, 1985ರವರೆಗೂ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕೋಮುವಾದವನ್ನು ಈ ದೇಶದಲ್ಲಿ ಹುಟ್ಟು ಹಾಕಿದ್ದೇ ಬಿಜೆಪಿ. ಕಾಂಗ್ರೆಸ್ ದೇಶದ ಎಲ್ಲ ವರ್ಗಗಳನ್ನು ಒಟ್ಟುಗೂಡಿಸಿದರೆ, ಬಿಜೆಪಿ ಒಡೆಯುತ್ತಿದೆ ಎಂದು ಬಿಜೆಪಿಯ ವಿರುದ್ಧ ಹರಿಯಾಯ್ದರು.[ಸಿದ್ದರಾಮಯ್ಯ ಒಬ್ಬ ತಲಾಕ್ ರಾಜಕಾರಣಿ: ಈಶ್ವರಪ್ಪ ವ್ಯಂಗ್ಯ]

ನಾವು ಭ್ರಷ್ಟಾಚಾರ ಮಾಡಿದ್ದರೆ ಸಾಕ್ಷ್ಯಾಧಾರ ಕೊಡಿ ಎಂದು ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ ಪರಮೇಶ್ವರ್, 2018 ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂಬ ವಿಶ್ವಾಸ ವ್ಯಕ್ತಪಡಿಸಿದರು.[ಕೃಷ್ಣರ 'ದೂರಾಲೋಚನೆ' ಹೇಳಿಕೆಗೆ ಸಿದ್ದು ತಿರುಗೇಟು]
ಏಪ್ರಿಲ್ 9, ಭಾನುವಾರದಂದು ನಡೆಯಲಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಗೆ ಇನ್ನು ಕೆಲವೇ ದಿನಗಳಿದ್ದು, ಏಪ್ರಿಲ್ 13, ಗುರುವಾರದಂದು ಫಲಿತಾಂಶ ಹೊರಬೀಳಲಿದೆ.[84ರ ಪ್ರಾಯದಲ್ಲಿ ಮದುವೆ ಆಗೋಕೆ ಸಾಧ್ಯವೇ: ಕೃಷ್ಣಗೆ ಇಬ್ರಾಹಿಂ ಲೇವಡಿ]












Click it and Unblock the Notifications