ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಗಿರೀಶ್ ಕಾರ್ನಾಡ್

ಬೆಂಗಳೂರು, ಜು.19 : ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಟಕಕಾರ ಗಿರೀಶ್ ಕಾರ್ನಾಡ್ ಉದ್ಘಾಟಿಸಲಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ನಡೆದ 2014ರ ದಸರಾ ಸಿದ್ಧತೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಗಿರೀಶ್ ರಘುನಾಥ್ ಕಾರ್ನಾಡ್ (76) ಅವರಿಂದ ಮೈಸೂರು ದಸರಾ ಉದ್ಘಾಟನೆ ಮಾಡಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಸೆ.25ರಿಂದ ಆ.4ರ ತನಕ ಈ ಬಾರಿ ದಸರಾ ಉತ್ಸವ ನಡೆಯಲಿದೆ.

Karnad

ಶನಿವಾರ ನಡೆದ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್, ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್. ಎಚ್.ಸಿ.ಮಹದೇವಪ್ಪ, ಮೈಸೂರು ಜಿಲ್ಲಾಧಿಕಾರಿ ಮುಂತಾದವರು ಪಾಲ್ಗೊಂಡಿದ್ದರು. ದಸರಾ ಉತ್ಸವದ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. [ದೊರೆಯಿಲ್ಲದ ಮೈಸೂರು ದಸರಾ, ಮುಂದೇನು?]

ಸಭೆಯಲ್ಲಿ ಭಾಗವಹಿಸಿದ್ದ ಸಂಸದ ಪ್ರತಾಪ್ ಸಿಂಹ ಅವರು ಸಾಹಿತಿ ಎಸ್.ಎಲ್.ಭೈರಪ್ಪ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಪ್ರಸ್ತಾಪಿಸಿದರು. ಈ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆದ ಬಳಿಕ ಗಿರೀಶ್ ಕಾರ್ನಾಡ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಯಿತು. ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಗಿರೀಶ್ ಕಾರ್ನಾಡ್ ಹೆಸರು ಘೋಷಿಸಿದರು. [ಮೈಸೂರು ದಸರಾ 2013 ಮರೆಯದ ಚಿತ್ರಗಳು]

6 ಕೋಟಿ ರೂ.ಗಳಿಗೆ ಬೇಡಿಕೆ : 2014ನೇ ಸಾಲಿನ ದಸರಾ ಮಹೋತ್ಸವಕ್ಕಾಗಿ 6 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಡಿಕೆ ಇಟ್ಟರು. ದಸರಾ ಸಿದ್ಧತಾ ಸಮಿತಿಯಲ್ಲಿ ಶಾಸಕರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ದಸರಾ ಉತ್ಸವದ ಸಮಯದಲ್ಲಿ ಅಂದರೆ, ಸೆ.15 ನ.15 ವರೆಗೆ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಎಲ್ಲಾ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ದಸರಾ ಉತ್ಸವದ ಮಾಹಿತಿಯನ್ನು ಎಲ್ಲಾ ಸರ್ಕಾರಿ ವೆಬ್ ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಗಳ ಮೂಲಕ ಜನರಿಗೆ ತಲುಪಿಸಲು ತೀರ್ಮಾನಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+