ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಮೈಸೂರು, ಮೇ 28 : ವಿವಿಧ ಕಾರಣಕ್ಕಾಗಿ ಮಾನ್ಯತೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12 ಮತ್ತು 2012-13 ಸಾಲಿನ ವಿದ್ಯಾರ್ಥಿಗಳಿಗೆ ಸದ್ಯ ಸಿಹಿ ಸುದ್ದಿಯೊಂದು ಲಭ್ಯವಾಗಿದೆ.
ಯುಜಿಸಿಯಿಂದ ಮಾನ್ಯತೆ ಸಿಕ್ಕ ಬಳಿಕ ಹಲವಾರು ಸಕಾರಾತ್ಮಕ ಕಾರ್ಯಕ್ರಮ ಅನುಷ್ಠಾನಕ್ಕೆ ಬರುತ್ತಿದೆ. ಇದೀಗ ಅದೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ, ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆಗೆ ಅವಕಾಶ ಕಲ್ಪಿಸುವ ಈ ಪ್ರಮುಖ ತೀರ್ಮಾನವನ್ನು ರಾಜ್ಯ ಮುಕ್ತ ವಿವಿ ತೆಗೆದುಕೊಂಡಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದಲ್ಲಿ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಹಾಗೂ ಕರ್ನಾಟಕ ಸರಕಾರದ ಆದೇಶದಂತೆ ಪರೀಕ್ಷೆ ಬರೆಯಲು ಅವಕಾಶ ಕೊಡುವ ಉದ್ದೇಶದಿಂದ ಅಂತರ್ ಗೃಹ 2011-12, 2012-13 ನೇ ಸಾಲಿನ ಬಿ.ಎ, ಬಿ.ಕಾಮ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಸಹ ಹೊರಡಿಸಲಾಗುತ್ತದೆ ಎಂದರು.

2018-19ನೇ ಸಾಲಿಗೆ ದಾಖಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯುವರಿಗೆ, ಜುಲೈನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ವು ಸಂಶೋಧನಾ ಕಾರ್ಯಕ್ಕೂ ಅವಕಾಶ ನೀಡಿದ್ದಾಗಿ ತಿಳಿಸಿದ ಅವರು, 2008 ಹಾಗೂ 2012ನೇ ಸಾಲಿನಲ್ಲಿ ನೋಂದಣಿಯಾಗಿದ್ದ 118 ಪಿಎಚ್.ಡಿ ವಿದ್ಯಾರ್ಥಿಗಳು ಸಂಶೋಧನಾ ಕಾರ್ಯ ಮುಂದುವರಿಸಬಹುದು ಎಂದರು.
ಮುಕ್ತ ವಿಶ್ವವಿದಾನಿಲಯದಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ಈ ಬಾರಿ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯಗೊಳಿಸಲಾಗಿದೆ. ಸ್ನಾತಕ ವಿಧ್ಯಾರ್ಥಿಗಳಿಗೆ ಮೂರು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣಕ್ರಮವಿದ್ದು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎರಡು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮವಿರುತ್ತದೆ. ಒಂದೊಂದು ಹಂತಗಳಿಗೆ ಒಂದೊಂದು ವರ್ಷದಲ್ಲಿ ತರಬೇತಿ ನೀಡಲಾಗುತ್ತದೆ. ಮೊದಲನೇ ಹಂತದ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮದ ವೇಳಾಪಟ್ಟಿ ಮುಕ್ತ ವಿವಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ ಎಂದರು.
ಕೆಎಸ್ ಒಯು ವೆಬ್‌ಸೈಟ್ ಅನ್ನು 2019-20ನೇ ಸಾಲಿನ ದಾಖಲಾತಿ ಅರ್ಜಿ ಆಹ್ವಾನದ ಬಳಿಕ 31,270 ಮಂದಿ ವೀಕ್ಷಿಸಿದ್ದಾರೆ. ಈ ಪೈಕಿ 77 ಮಂದಿ ಈಗಾಗಲೇ ಪೂರ್ಣ ಶುಲ್ಕ ನೀಡಿ ವಿವಿಧ ಕೋರ್ಸ್ ಗಳಿಗೆ ದಾಖಲಾಗಿದ್ದಾರೆ. 759 ಮಂದಿ ನೋಂದಣಿ ಶುಲ್ಕ ಪಾವತಿಸಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ದಾಖಲಾತಿ ಆಗುವುದು ಖಚಿತ ಎಂದು ಅವರು ಹೇಳಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications