ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾರದೊಳಗೆ ನಂಜನಗೂಡು ಟಿಎಚ್ಒ ಆತ್ಮಹತ್ಯೆ ಪ್ರಕರಣ ತನಿಖೆಗೆ ಆದೇಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 25: ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ತನಿಖಾ ವರದಿ ನೀಡುವಂತೆ ಸರ್ಕಾರ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಗೆ ಸೂಚಿಸಲಾಗಿದೆ.

ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ ತನಿಖೆಯ ಆದೇಶ ಸ್ವೀಕರಿಸಿರುವ ಜಿ.ಸಿ.ಪ್ರಕಾಶ್ ಅವರು, ನಿನ್ನೆ ಸಂಜೆಯಿಂದ ತನಿಖೆ ಆರಂಭಿಸಿದ್ದಾರೆ.

ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣುಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು

ನಿನ್ನೆ ಮಧ್ಯಾಹ್ನವಷ್ಟೇ ಪ್ರಕಾಶ್ ಅವರು, ಪ್ರಕರಣದ ತನಿಖೆಗೆ ಸರ್ಕಾರದಿಂದ ಇನ್ನೂ ಆದೇಶ ಬಂದಿಲ್ಲ. ಇಂದು ಸಂಜೆಯೊಳಗೆ ಆದೇಶ ಬರುವ ಸಾಧ್ಯತೆಯಿದ್ದು, ಆದೇಶ ಬಂದ ಕೂಡಲೇ ತನಿಖೆ ಆರಂಭಿಸಿ ಒಂದು ವಾರದೊಳಗೆ ವರದಿ ನೀಡುತ್ತೇನೆ ಎಂದಿದ್ದರು.

Mysuru: Government Ordered Investigation Of Nanjangudu THO Suicide Case Within Week

ಡಾ.ನಾಗೇಂದ್ರ ಅವರು ಆ.20ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮೇಲೆ ಆರೋಪಗಳು ಕೇಳಿಬಂದಿದ್ದವು. ಪ್ರಕರಣದಲ್ಲಿ ಮಿಶ್ರಾ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಮಿಶ್ರಾ ಪರ, ವಿರೋಧವಾಗಿ ಪ್ರತಿಭಟನೆಗಳು ನಡೆದಿದ್ದವು. ಡಾ.ನಾಗೇಂದ್ರ ಸಾವಿಗೆ ಕಾರಣರಾಗಿರುವ ಮಿಶ್ರಾ ಅವರನ್ನು ವರ್ಗಾವಣೆ ಮಾಡುವಂತೆ ವೈದ್ಯರು ಬಿಗಿ ಪಟ್ಟು ಹಿಡಿದಿದ್ದರು. ಅದರಂತೆ ಮಿಶ್ರಾ ಅವರನ್ನು ಸರ್ಕಾರ ಈಗಾಗಲೇ ವರ್ಗಾವಣೆಗೊಳಿಸಿದೆ.

ಮಿಶ್ರಾ ಪರವಾಗಿ ಪಿಡಿಒಗಳು ಅವರ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ನಿನ್ನೆ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಇತ್ತ ಮುಷ್ಕರ ಹಿಂಪಡೆದಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

English summary
Government has ordered Commissioner GC Prakash to submit an investigation report of Nanjanagudu THO Dr. Nagendra suicide case within week
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X