ದೊರೆಯಿಲ್ಲದ ಮೈಸೂರು ದಸರಾ, ಮುಂದೇನು?

ಮೈಸೂರು, ಜು. 7 : ಮೈಸೂರು ರಾಜವಂಶದ ಉತ್ತರಾಧಿಕಾರಿ ಯಾರು? ಎಂಬ ಪ್ರಶ್ನೆಗೆ ಉತ್ತರ ಇನ್ನು ದೊರಕಿಲ್ಲ. ಆಗಲೇ ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಆದ್ದರಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪತ್ನಿ ಪ್ರಮೋದಾ ದೇವಿ ಅವರೊಂದಿಗೆ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಂದಾಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಜು.19ರಂದು ಬೆಂಗಳೂರಿನಲ್ಲಿ ದಸರಾ ಉತ್ಸವದ ಸಿದ್ಧತೆಗಳ ಕುರಿತ ಮೊದಲ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಪ್ರಮೋದಾ ದೇವಿ ಅವರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

Srikantadatta Narasimharaja Wodeyar

ಸಾಂಪ್ರದಾಯಿಕ ದಸರಾ ಆಚರಣೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆಯೇ?, ಯದು ವಂಶದ ಉತ್ತರಾಧಿಕಾರಿ ಯಾರು? ಎಂಬ ಕುತೂಹಲ ಜನರಿಗೆ ಇದೆ. ಆದ್ದರಿಂದ ಈ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದರು. [ಶ್ರೀಕಂಠದತ್ತ ಒಡೆಯರ್ ಉತ್ತರಾಧಿಕಾರಿ ಯಾರು?]

ಸರ್ಕಾರ ರಾಜವಂಶ ಸಾಂಪ್ರದಾಯಿಕವಾಗಿ ನಡೆಸುತ್ತಿರುವ ಖಾಸಗಿ ದರ್ಬಾರ್ ವಿಷಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ನಾಡಹಬ್ಬವನ್ನು ಹೇಗೆ ಆಚರಣೆ ಮಾಡಬೇಕು? ಎಂಬ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.[ಒಡೆಯರ್ ಅವರಿಗೆ ಚಿತ್ರ ನಮನ]

ಸದ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಾಗಬಹುದು ಅಥವಾ ವಾರಾಂತ್ಯದಲ್ಲಿ ಮುಖ್ಯಮಂತ್ರಿಗಳು ಮೈಸೂರಿಗೆ ಬಂದರೆ, ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಮಾಡಿ ದಸರಾ ಆಚರಣೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.

ಅಂದಹಾಗೆ ಸೆಪ್ಟೆಂಬರ್ ಕೊನೆಯ ವಾರ ಮತ್ತು ಅಕ್ಟೋಬರ್ ಮೊದಲ ವಾರದಲ್ಲಿ ಈ ಬಾರಿಯ ದಸರಾ ಉತ್ಸವ ನಡೆಯಲಿದೆ. ಅದಕ್ಕೂ ಮೊದಲು ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆಯಲಿದೆಯೇ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+