Mysuru: ಮೈಸೂರು ದಸರಾ ಆನೆಗಳಿಗೆ ಅದ್ದೂರಿ ಬೀಳ್ಕೊಡುಗೆ

ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಅರಮನೆ ಆವರಣದಿಂದ ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ದಿನ ಗಜಪಡೆ ವೀಕ್ಷಿಸಲು ಪ್ರವಾಸಿಗರ ತಂಡ ಕೂಡ ಜಮಾಯಿಸಿತ್ತು. ಸೋಮವಾರ ಬೆಳಗ್ಗೆಯಿಂದಲೇ ಅಭಿಮನ್ಯು ಸೇರಿದಂತೆ ದಸರಾ ಆನೆಗಳನ್ನು ವೀಕ್ಷಿಸಲು ಸಾಕಷ್ಟು ಜನರು ಆಗಮಿಸಿದ್ದರು. ಕೆಲವರು ಆನೆಯ ಬಳಿ ನಿಂತು ಫೋಟೊ ತೆಗೆಸಿಕೊಂಡರು. ಬಳಿಕ ಆನೆಗಳಿಗೆ ಸ್ನಾನ ಮಾಡಿಸುವುದನ್ನು ನೋಡಿ ಸಂಭ್ರಮಿಸಿದರು.

ದಸರಾದಲ್ಲಿ ಭಾಗವಹಿಸಿದ್ದ 14 ಆನೆಗಳಿಗೆ ಪುರೋಹಿತ ಪ್ರಹ್ಲಾದರಾವ್ ನೇತೃತ್ವದಲ್ಲಿ ಅರಮನೆ ಮಂಡಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಬೂದುಗುಂಬಳ ಒಡೆದು ದೃಷ್ಟಿ ತೆಗೆದು ಆನೆಗಳಿಗೆ ನಾನಾ ಹಣ್ಣು ಹಂಪಲು ಹಾಗೂ ಬೆಲ್ಲ ನೀಡಲಾಯಿತು. ಪೂಜೆ ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬ ವರ್ಗದವರಿಗೆ ಉಪಾಹಾರ ನೀಡಿ ಆನೆಗಳೊಂದಿಗೆ ಅವರನ್ನು ಬೀಳ್ಕೊಡಲಾಯಿತು.

Grand Send-off Given to Elephants Participating in Mysuru dasara Jambu Savari

ಮೊದಲ ತಂಡದಲ್ಲಿ ಮತ್ತಿಗೋಡು ಆನೆ ಶಿಬಿರದ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ರಾಂಪುರ ಆನೆ ಶಿಬಿರದ ರೋಹಿತ್, ದೊಡ್ಡಹರವೆ ಆನೆ ಶಿಬಿರದ ಲಕ್ಷ್ಮೀ, ವರಲಕ್ಷ್ಮೀ, ಕೊಡಗು ಜಿಲ್ಲೆಯ ದುಬಾರೆ ಶಿಬಿರದ ಧನಂಜಯ, ಗೋಪಿ, ಕಂಜನ್ ಅರಮನೆಗೆ ಬಂದಿದ್ದವು. ಎರಡನೇ ತಂಡದಲ್ಲಿ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ಗಂಡಾನೆಗಳಾದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಆನೆ ಶಿಬಿರದ ಮಹೇಂದ್ರ, ರಾಮಪುರ ಆನೆ ಶಿಬಿರದ ಹೆಣ್ಣಾನೆ ಹಿರಣ್ಯಾ, ಲಕ್ಷ್ಮೀ ಆನೆ ಆಗಮಿಸಿದ್ದವು.

"ಅಭಿಮನ್ಯು ಅಂಬಾರಿ ಹೊತ್ತು ಜಂಬೂ ಸವಾರಿ ಯಶಸ್ಸುಗೊಳಿಸಿದ್ದು, ಎಲ್ಲಾ ಆನೆಗಳೂ ಅತ್ಯುತ್ತಮವಾಗಿ ಸ್ಪಂದಿಸಿವೆ. ಅರ್ಜುನನ ಅನುಪಸ್ಥಿತಿ ಕಾಡದಂತೆ ಧನಂಜಯ ತನ್ನ ಕಾರ್ಯ ನಿಭಾಯಿಸಿದ್ದಾನೆ. ಧನಂಜಯ, ಮಹೇಂದ್ರನನ್ನು ಅಂಬಾರಿ ಆನೆಯಾಗಿ ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಸಿಎಫ್ ಮಾಲತಿಪ್ರಿಯಾ ತಿಳಿಸಿದ್ದಾರೆ.

ಅದ್ದೂರಿ ದಸರಾ ಸಂಪನ್ನ

ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ. ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಮಕ್ಕಳ ದಸರಾ ಸಾಕಷ್ಟು ಗಮನ ಸೆಳೆದವು. ಮೈಸೂರನ್ನು ಜಗಮಗಿಸುವ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು, ದೀಪಾಲಂಕಾರ ನೋಡಿ ಸಿಎಂ ಸಿದ್ದರಾಮಯ್ಯನವರೇ ಮೆಚ್ಚಿಕೊಂಡಿದ್ದರು. ಈ ಬಾರಿ ವಿಶೇಷವಾಗಿ ಡ್ರೋನ್ ಶೋ ಕೂಡ ಆಯೋಜನೆ ಮಾಡಿದ್ದು, ದಸರಾ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+