ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂತು ಚಿರತೆ ದಂಡು!

ಮೈಸೂರು, ಫೆಬ್ರವರಿ 01 : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ರಾತ್ರಿ ವೇಳೆ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಚಿರತೆಗಳ ಓಡಾಟ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಹಿಂದೆ ಚಾಮುಂಡಿಬೆಟ್ಟದ ತಪ್ಪಲಿನ ರೇಸ್‌ಕೋರ್ಸ್ ರಸ್ತೆಯಲ್ಲಿ ಚಿರತೆ ಮತ್ತು ಮುಳ್ಳುಹಂದಿ ಒಟ್ಟಾಗಿ ಕಾಣಿಸಿಕೊಂಡ ಬೆನ್ನಿಗೇ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿಯೂ ಮೂರು ಚಿರತೆಗಳು ಕಾಣಿಸಿಕೊಂಡಿವೆ. ಚಿರತೆ ಅಡ್ಡಾಡಿದ ದೃಶ್ಯಗಳು ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ದಾಖಲಾಗಿವೆ.

ಕಳೆದ ವಾರದಿಂದೀಚೆಗೆ ರಾತ್ರಿಯ ವೇಳೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇಲ್ಲಿ ವಾಸವಿರುವ ನಿಲ್ದಾಣದ ಅಧಿಕಾರಿಗಳಲ್ಲಿ ಭಯ ಉಂಟುಮಾಡಿದೆ. ಮೂರು ಚಿರತೆಗಳು ರಾತ್ರಿಯ ವೇಳೆ ಆಹಾರ ಹುಡುಕುತ್ತಾ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿರುವ ದೃಶ್ಯ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Group of leapard spotted in Mysuru airport Wednesday night

ನಿಲ್ದಾಣದ ಅಧಿಕಾರಿಗಳು ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದು, ಅರಣ್ಯ ಸಿಬ್ಬಂದಿ ನಿಲ್ದಾಣದ ಆವರಣದಲ್ಲಿ ಚಿರತೆ ಪತ್ತೆಗೆ ಕಾರ್ಯಾಚರಣೆ ನಡೆಸಿದರು. ರಾತ್ರಿ ವೇಳೆ 8ರಿಂದ 9ರವರೆಗೆ ಚೆನ್ನೈಗೆ ಉಡಾನ್ ಯೋಜನೆಯಡಿ ವಿಶೇಷ ವಿಮಾನ ಸಂಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರು ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ಸಂಚರಿಸುವುದರಿಂದ ಯಾವುದೇ ರೀತಿ ಸಮಸ್ಯೆಯಾಗದಿರಲಿ ಎಂಬ ಕಾರಣಕ್ಕೆ ನಿಲ್ದಾಣದ ಸಿಬ್ಬಂದಿ ಈ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರು.

ವಿಮಾನ ನಿಲ್ದಾಣದ ಅಲ್ಲಲ್ಲಿ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+