ಆಗಸ್ಟ್‌ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್‌, 12: ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು. ಈ ತಿಂಗಳ ಅಂತ್ಯಕ್ಕೆ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ? ಇದೀಗ ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೇ ಇರುವವರಿಗೆ ಬಿಲ್‌ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಆ ಬಗ್ಗೆ ಭಯ ಇರುತ್ತದೆ. ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಏನು ವಿಚಾರ ಇಲ್ಲದೇ ಇರುವುದರಿಂದ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.

gruhalakshmi-scheme-implementation

40% ಕಮಿಷನ್‌ನಿಂದಾಗಿಯೇ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಂದು ನಾವು ಮಾಡಿರುವ ಆರೋಪವನ್ನು ಈಗ ಸಾಬೀತು ಮಾಡಬೇಕಿದೆ. ಇದೇ ಕಾರಣದಿಂದ ನಾಲ್ಕು ಟೀಂ ತನಿಖೆ ಮಾಡುತ್ತಿವೆ. ನಡೆದಿರುವ ಕಾಮಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿವೆ. ಈಗ ಬಿಲ್‌ಗಾಗಿ ಆತುರ ಪಟ್ಟರೆ ಹೇಗೆ? ಎಂದು ಪ್ರಶ್ನಿಸಿದರು.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗಾಗಿ ಒಂದು ಸಮಿತಿ ಮಾಡಿದ್ದೇವೆ. ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

ಇನ್ನು ವಾರ್ಡ್‌ಗಳ ಪುನರ್ ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಗಡುವು ನೀಡಿದೆ. ಗಡುವಿನೊಳಗೆ ವರದಿಗಳು ಸಿದ್ಧವಾಗಲಿವೆ. ಅದನ್ನು ಕೋರ್ಟ್‌ಗೆ ನಾವು ನೀಡುತ್ತೇವೆ. ಚುನಾವಣೆ ವಿಚಾರದಲ್ಲಿ ನಾವು ಯಾವುತ್ತೂ ಹಿಂದೆ ಬಿದ್ದಿಲ್ಲ. ಬಿಜೆಪಿಯವರು ಚುನಾವಣೆಗಳನ್ನು ಮುಂದೂಡುತ್ತಿದ್ದರು. ನಾವು ಆ ರೀತಿ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ ಎಂದರು.

ನನ್ನ ಹುಟ್ಟುಹಬ್ಬ ಆಗಸ್ಟ್ 3 ಅಲ್ಲ, ಆಗಸ್ಟ್ 12 ಅಲ್ಲ. ಎರಡೂ ಕೂಡ ತಪ್ಪು ದಿನಾಂಕಗಳು. ಒಂದು ನನ್ನ ಮೇಷ್ಟ್ರು ಬರೆಸಿರೋದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರೋದು. ಹೀಗಾಗಿ ಎರಡೂ ದಿನಾಂಕಗಳು ತಪ್ಪು. ನನ್ನ ಜನ್ಮ ದಿನಾಂಕ ನನಗೇ ಸರಿಯಾಗಿ ಗೊತ್ತಿಲ್ಲ. ಹೀಗಾಗಿ ನನಗೆ ಯಾವ ಆಸಕ್ತಿಯೂ ಇಲ್ಲ ಎಂದು ಹೇಳಿದರು.

ಸಿಜೆ ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೊಂದು ಷಡ್ಯಂತ್ರವಾಗಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟು ತಮಗೆ ಬೇಕಾದವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. ಐಪಿಸಿ ಸೇರಿದಂತೆ ಕೆಲವು ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಐಪಿಸಿ 1861ರಲ್ಲಿ ರಚನೆಯಾದ ಕಾನೂನು. ಏನು ಮಾಡುತ್ತಾರೋ ಕಾದುನೋಡೋಣ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+