ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲು; ಗೌಡರು ಹೇಳಿದ್ದೇನು?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 20: 2018ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು ಕಂಡಿದ್ದರು. ಈ ಸೋಲಿನ ಕುರಿತು ಅವರು ಶುಕ್ರವಾರ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಿದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ" ಎಂದರು.

 29 ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಜತೆ ಒಳಒಪ್ಪಂದ; ಸಿದ್ದರಾಮಯ್ಯ ತಿರುಗೇಟು 29 ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಜತೆ ಒಳಒಪ್ಪಂದ; ಸಿದ್ದರಾಮಯ್ಯ ತಿರುಗೇಟು

"ಈ ಮೊದಲು ವರುಣ, ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲೂಕು ಬೋರ್ಡ್ ಸದಸ್ಯನಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅವರು ಇದ್ದರು. ವರುಣ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು" ಎಂದು ಜಿ. ಟಿ. ದೇವೇಗೌಡ ಹೇಳಿದರು.

ಉಗಿದದ್ದನ್ನು ಮತ್ತೆ ಬಾಯಿಗೆ ಹಾಕಿಕೊಂಡ ಸಿದ್ದರಾಮಯ್ಯ; ಸಿ. ಟಿ. ರವಿ ಉಗಿದದ್ದನ್ನು ಮತ್ತೆ ಬಾಯಿಗೆ ಹಾಕಿಕೊಂಡ ಸಿದ್ದರಾಮಯ್ಯ; ಸಿ. ಟಿ. ರವಿ

 GT Deve Gowda On Siddaramaiah Comment On Defeat At Chamundeshwari

"ವರುಣಾದಿಂದ ಗೆದ್ದರೂ ಸಹ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಸಿದ್ದರಾಮಯ್ಯ ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ" ಎಂದು ದೇವೇಗೌಡರು ಪ್ರತಿಕ್ರಿಯೆ ಕೊಟ್ಟರು.

ಸಿದ್ದರಾಮಯ್ಯ ಹೇಳಿಕೆಗೆ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ಸಿದ್ದರಾಮಯ್ಯ ಹೇಳಿಕೆಗೆ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ

ಜೆಡಿಎಸ್-ಬಿಜೆಪಿ ಒಳ ಒಪ್ಪಂದ; "ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8 ಸಾವಿರ ಮತಗಳನ್ನು ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು. ಬಿಜೆಪಿ15 ಸಾವಿರ ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ಓಟ್ ಪಡೆದುಕೊಂಡಿದೆ" ಎಂದು ಹೇಳಿದ ಜಿ. ಟಿ. ದೇವೇಗೌಡರು ಒಳ ಒಪ್ಪಂದದ ಸುದ್ದಿ ಅಲ್ಲಗಳೆದರು.

"ಮೈತ್ರಿ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಕಾರಣ‌. ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು. ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು. ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು" ಎಂದರು.

"ಶಾಸಕರು ಪಕ್ಷ ಬಿಡದಂತೆ ತಡೆಯುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಲಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌" ಎಂದು ಜಿ. ಟಿ. ದೇವೇಗೌಡ ಹೇಳಿದರು.

English summary
Siddaramaiah statement on defeat at Chamundeshwari in 2018 assembly elections. Chamundeshwari JD(S) MLA G. T. Deve Gowda on Siddaramaiah comment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X