ಹುಣಸೂರು ಬಿಜೆಪಿ ಅಭ್ಯರ್ಥಿಗೆ ಬೆಂಬಲ: ದೇವೇಗೌಡ ಸ್ಪಷ್ಟನೆ

Recommended Video

      G T Devegowda supports BJP candidate in Hunasuru in by elections is not true | Oneindia Kannada

      ಮೈಸೂರು, ಡಿಸೆಂಬರ್ 3: ಉಪ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದ ಅಭ್ಯರ್ಥಿಗೆ ಬೆಂಬಲ ನೀಡುತ್ತಿರುವುದಾಗಿ ತಮ್ಮ ಕುರಿತು ಹರಿದಾಡುತ್ತಿರುವ ವರದಿಗಳು ಸತ್ಯಕ್ಕೆ ದೂರ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

      ಹಾಗೆಯೇ, ಅವರು ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜಕೀಯವಾಗಿ ತಟಸ್ಥನಾಗಿ ಇರುತ್ತೇನೆ ಎನ್ನುವ ಮೂಲಕ ತಮ್ಮದೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿಯೂ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿ.ಟಿ. ದೇವೇಗೌಡ, 'ನಾನು ಯಾವ ಅಭ್ಯರ್ಥಿಯ ಪರವಾಗಿಯೂ ಒಲವು ತೋರಿಸಿಲ್ಲ. ಆದರೂ ಬಿಜೆಪಿ ಅಭ್ಯರ್ಥಿಯನ್ನು ಒಕ್ಕಲಿಗ ಸಮುದಾಯ ಒಗ್ಗೂಡಿ ಹುಣಸೂರಿನಲ್ಲಿ ಅತಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ಗಳು ಹರಿದಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ' ಎಂದು ತಿಳಿಸಿದ್ದಾರೆ.

      GT Devegowda Clarification On Support To Hunasuru BJP Candidate

      ಈ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಇಂತಹ ಸುಳ್ಳು ಸುದ್ದಿ ಸೃಷ್ಟಿಸಿರುವವರ ವಿರುದ್ಧ ಮತ್ತು ಇಂತಹ ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಮಾಡಿದ್ದೇನೆ. ಕಿಡಿಗೇಡಿಗಳು ಸೃಷ್ಟಿಸಿರುವ ಇಂತಹ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು ಎಂದು ಜಿ.ಟಿ. ದೇವೇಗೌಡ ಕೋರಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+