ನಿರ್ದೇಶಕರಾಗಿ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡ ಅವಿರೋಧ ಆಯ್ಕೆ
ಮೈಸೂರು, ನವೆಂಬರ್.07: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡ ಹಾಗೂ ಸಿ.ಬಸವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹುಣಸೂರು ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಹರೀಶ್‌ಗೌಡ ನಾಮಪತ್ರ ಸಲ್ಲಿಸಿದ್ದು, ಎದುರಾಳಿ ಗಾಗೇನಹಳ್ಳಿ ಕುಮಾರ್ ಅವರು ಸಹಿ ಹಾಕಿರದ ಕಾರಣ ನಾಮಪತ್ರ ತಿರಸ್ಕೃತವಾಗಿರುವುದರಿಂದ ಹರೀಶ್ ಗೌಡ ಆಯ್ಕೆಯಾಗಿದ್ದಾರೆ. ಇವರು ಎರಡನೇ ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ತಿ.ನರಸೀಪುರ ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘದ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಹಿರಿಯ ಸಹಕಾರಿ ಹಾಗೂ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಕೂಡ ಸತತ 6ನೇ ಬಾರಿ ಆಯ್ಕೆಯಾಗಿದ್ದು, ನ. 12ರಂದು ನಿರ್ದೇಶಕ ಮಂಡಳಿಯ ಚುನಾವಣೆ ನಡೆಯಲಿದೆ.












Click it and Unblock the Notifications