ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್; ಎಚ್. ವಿಶ್ವನಾಥ್
ಮೈಸೂರು, ಫೆಬ್ರವರಿ 12: "ಇದು ಯಾವ ಅಹಿಂದ ಹೋರಾಟವೂ ಅಲ್ಲ. ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರ ಸ್ವಾರ್ಥದ ಹೋರಾಟ. ಸಿದ್ದರಾಮಯ್ಯ ಅಹಿಂದ ಎಂದು ಚಡಪಡಿಸುತ್ತಿದ್ದಾರೆ ಅವರಿಗೆ ಅಸ್ತಿತ್ವ, ಅಭದ್ರತೆ ಕಾಡುತ್ತಿದೆ" ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, "ಕುರುಬ ಸಮಾಜದ ಎಸ್‌ಟಿ ಹೋರಾಟ ಸಿದ್ದರಾಮಯ್ಯ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರು ಸೇರಿಸಿ ಯಶಸ್ಸು ಕಂಡಿದ್ದೇವೆ. ನಾನು ಇಲ್ಲದಿದ್ದರೆ ಆಗಲ್ಲ ಅಂದು ಕೊಂಡಿದ್ದರು" ಎಂದು ದೂರಿದರು.
"ಸಿದ್ದರಾಮಯ್ಯ ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಇತ್ತು. ಸಮುದಾಯ ನನ್ನ ಜೊತೆ ಇಲ್ಲ ಅನ್ನೋದು ಈಗ ಅವರಿಗೆ ಕಾಣುತ್ತಿದೆ. ಡಿ. ಕೆ. ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆ" ಎಂದು ವಿಶ್ವನಾಥ್ ಹೇಳಿದರು.

"ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರರನ್ನು ಬಿಟ್ಟು ಅಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ, ಮುಸ್ಲಿಂಮರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕದ ಟ್ರಂಪ್; "ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಇದು ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ. ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ. ಸಿದ್ದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆದವರು ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ. ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ" ಎಂದು ವಿಶ್ವನಾಥ್ ದೂರಿದರು.
"ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಅದು ನಮ್ಮ ಪಕ್ಷದ ಆಂತರಿಕ ವಿಚಾರ ಇವರಿಗೇಕೆ?" ಎಂದು ಪ್ರಶ್ನಿಸಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications