'ಸಿದ್ದರಾಮಯ್ಯ ಸಿಎಂ ಆಗಲೆಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ'

Recommended Video

      ಸಿದ್ದರಾಮಯ್ಯನವರ ಬಗ್ಗೆ ಎಚ್ ವಿಶ್ವನಾಥ್ ಹೇಳಿದ್ದೇನು | Oneindia Kannada

      ಮೈಸೂರು, ಮೇ 13: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಆಡಳಿತ ಮಾಡಿದರೂ, ಏನು ಸಾಧನೆ ಮಾಡಿದ್ದಾರೆ ? ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಕೇವಲ 78 ಸ್ಥಾನಗಳನ್ನು ಗಳಿಸಿದರು. ಒಳ್ಳೆಯ ಕೆಲಸ ಮಾಡಿದ್ದರೆ ಜನರು ಅವರನ್ನು ಏಕೆ ಸೋಲಿಸುತ್ತಿದ್ದರು ಎಂದು ಪ್ರಶ್ನಿಸಿದರು.

      ದೇವರಾಜ ಅರಸು ಅವರನ್ನು ಜನ ಈಗಲೂ ನೆನೆಯುತ್ತಾರೆ. ಸಿದ್ದರಾಮಯ್ಯ ಏನು ದೇವರಾಜು ಅರಸು ಕೊಟ್ಟ ರೀತಿ ಆಡಳಿತ ಕೊಟ್ಟಿದ್ದಾರಾ ? ಸಿದ್ದರಾಮಯ್ಯ ತನ್ನ ಕಾಲದ ಆಡಳಿತ ಚೆನ್ನಾಗಿತ್ತು. ಐದು ವರ್ಷ ಪೂರೈಸಿದ ಮುಖ್ಯಮಂತ್ರಿ ನಾನು ಅನ್ನುತ್ತಾರೆ. ಆದರೆ 130 ಸ್ಥಾನ ಇದ್ದ ಸಂಖ್ಯಾಬಲ 78ಕ್ಕೆ ಇಳಿತು ಎಂದು ವಾಗ್ದಾಳಿ ನಡೆಸಿದರು.

      H Vishwanath hits out at Siddaramaiah in Mysuru

      ಸಿದ್ದರಾಮಯ್ಯ ಬಾಯಿ ಚಪಲಕ್ಕೆ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಾರೆ ಅಷ್ಟೇ. ಇನ್ನು ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದ ವಿಶ್ವನಾಥ್, ಮತ್ತೆ ಚುನಾವಣೆ ಬಂದಾಗ ನೋಡೋಣ ಸಿದ್ದರಾಮಯ್ಯ ಸಿಎಂ ಆಗುವುದನ್ನು ಜನ ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

      ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಅವಕಾಶ ನೀಡಬೇಕು. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಾ.ದಳ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ಮೈತ್ರಿಯಾದರೆ ಸ್ಥಳೀಯ ನಾಯಕರಿಗೆ ಅವಕಾಶ ಸಿಗುವುದಿಲ್ಲ. ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಫಲಿತಾಂಶ ಸರ್ಕಾರದ ಮೇಲೆ ಪ್ರಭಾವ ಬೀರುವುದಿಲ್ಲ. ಸಮ್ಮಿಶ್ರ ರ್ಕಾರ ಬೀಳುತ್ತದೆ ಎನ್ನುವುದು ಕೇವಲ ಸುದ್ದಿಯಷ್ಟೇ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+