• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನ; ಎಚ್ ವಿಶ್ವನಾಥ್ ಭರವಸೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 20: ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದರು.

Recommended Video

   ಕಳೆದ 2 ವಾರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7 ₹ ಹೆಚ್ಚಳ | Petrol Price Hiked | Oneindia Kannada

   ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪರಿಷತ್ ಸ್ಥಾನಕ್ಕೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ. ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿರುವುದು ಸ್ವಾಗತಾರ್ಹ. ಕೆಲವೊಮ್ಮೆ ನಾವು ಅಂದುಕೊಂಡಿದ್ದಕ್ಕಿಂತ ದೊಡ್ಡದು ಸಿಗುತ್ತೆ. ಕೆಲವೊಮ್ಮೆ ಏನೂ ಸಿಗೋದೇ ಇಲ್ಲ. ರಾಜಕಾರಣ ಅಂದ್ರೆ ಸಿಗೋದು, ಪಡೆದುಕೊಳ್ಳೋದಲ್ಲ" ಎಂದರು.

   ಎಚ್ ವಿಶ್ವನಾಥ್ ಗೆ ತಪ್ಪಿದ ಟಿಕೆಟ್; ಸಾರಾ ಮಹೇಶ್ ಏನಂದರು...ಎಚ್ ವಿಶ್ವನಾಥ್ ಗೆ ತಪ್ಪಿದ ಟಿಕೆಟ್; ಸಾರಾ ಮಹೇಶ್ ಏನಂದರು...

    ಸಾಹಿತ್ಯ ಕ್ಷೇತ್ರದಿಂದ ವಿಶ್ವನಾಥ್ ಆಯ್ಕೆ?

   ಸಾಹಿತ್ಯ ಕ್ಷೇತ್ರದಿಂದ ವಿಶ್ವನಾಥ್ ಆಯ್ಕೆ?

   ನಾನೊಬ್ಬ ಬರಹಗಾರ. ನನ್ನ ಪುಸ್ತಕಗಳು ರಾಜಕೀಯಕ್ಕೆ ಸಂಬಂಧಪಟ್ಟಿವೆ. ಲಂಡನ್ ಪಾರ್ಲಿಮೆಂಟ್ ಬಗ್ಗೆ ಪುಸ್ತಕ ಬರೆದಿದ್ದೇನೆ. ಈ ಹಿನ್ನೆಲೆಯಲ್ಲಿ ಸಾಹಿತ್ಯ ಲೋಕದಿಂದ ನನ್ನನ್ನು ಆಯ್ಕೆ ಮಾಡಿ ಎಂದು ಮನವಿ‌ ಮಾಡಿದ್ದೇನೆ. ಸಿಎಂ ಇದಕ್ಕೆ ಒಪ್ಪಿದ್ದು, ಆಗಬಹುದು ಎಂದು ಹೇಳಿದ್ದಾರೆ.

   "ಮೇಲ್ಮನೆಗೆ ಆಯ್ಕೆಯಾಗೋಕೆ ಯಾವುದೇ ಅಡ್ಡಿ ಇಲ್ಲ‌"

   ನನ್ನನ್ನು ನಾಮನಿರ್ದೇಶನ ಮಾಡಲು ಯಾವುದೇ ಕಾನೂನಿನ ತೊಡಕಿಲ್ಲ. ಎಂಟಿಬಿ ನಾಗರಾಜ್ ಆಯ್ಕೆಗೆ ತೊಡಕಿಲ್ಲ ಅನ್ನೋದಾದರೆ ನನಗೆ ಏಕೆ ತೊಡಕಾಗುತ್ತೆ. ನನಗೂ ಕಾನೂನಿನ ಅರಿವಿದೆ. ನಮ್ಮ ಅನರ್ಹತೆ ಇದ್ದದ್ದು ಕೇವಲ ಕೆಳ ಮನೆಗೆ ಮಾತ್ರ. ಮೇಲ್ಮನೆಗೆ ಆಯ್ಕೆಯಾಗೋಕೆ ಯಾವುದೇ ಅಡ್ಡಿ ಇಲ್ಲ‌. ಸಾಹಿತ್ಯ ಕ್ಷೇತ್ರದಿಂದ ನನ್ನನ್ನು ನಾಮ ನಿರ್ದೇಶನ ಮಾಡುವ ವಿಶ್ವಾಸ ಇದೆ ಎಂದರು.

   ಎಚ್‌. ವಿಶ್ವನಾಥ್‌ಗೆ ಕೈ ತಪ್ಪಿದ ಟಿಕೆಟ್; ಸೋಮಶೇಖರ್ ಹೇಳಿದ್ದೇನು?ಎಚ್‌. ವಿಶ್ವನಾಥ್‌ಗೆ ಕೈ ತಪ್ಪಿದ ಟಿಕೆಟ್; ಸೋಮಶೇಖರ್ ಹೇಳಿದ್ದೇನು?

    ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ವಿಶ್ವನಾಥ್

   ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ವಿಶ್ವನಾಥ್

   ವಿಶ್ವನಾಥ್‌ಗೆ ಟಿಕೆಟ್ ಕೈ ತಪ್ಪಿದಾಗಲೆಲ್ಲ ನಾನೇ ನೆನಪಾಗುತ್ತೇನೆ ಎಂದಿದ್ದ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ ಅವರು ನನಗೆ ಟಿಕೆಟ್ ಕೈ ತಪ್ಪಿದಾಗ ಸಿದ್ದರಾಮಯ್ಯ ನೆನಪಾಗೋದಲ್ಲ. ಅವರು ಸಿಎಂ ಆಗಿದ್ದಕ್ಕೆ ನನ್ನನ್ನು ನೆನಪಿಸಿಕೊಳ್ಳಲಿ. ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆತಂದಿದ್ದು ನಾನು. ಇದನ್ನು ಸಿದ್ದರಾಮಯ್ಯ ಎಲ್ಲಿಯೂ ಹೇಳೋಲ್ಲ. ಪಾಪ ಅವರಿಗೆ ಕೃತಜ್ಞತಾ ಭಾವ ಇಲ್ಲ ಎಂದು ತಿರುಗೇಟು ಕೊಟ್ಟರು.

   "ಸಂದರ್ಭ ಬಂದಾಗ ಸಿದ್ದರಾಮಯ್ಯ ಬಗ್ಗೆ ಹೇಳ್ತೀನಿ"

   "ವಿಶ್ವನಾಥ್‌ನಿಂದ ನಾನು ಸಿಎಂ ಆಗಲು ಸಾಧ್ಯವಾಯ್ತು ಅಂತ ಸಿದ್ದರಾಮಯ್ಯ ಎಲ್ಲಿಯೂ ಹೇಳೋಲ್ಲ. ನನಗೆ ಟಿಕೆಟ್ ಕೈ ತಪ್ಪಲು ಅವರು ಹೇಗೆ ಕಾರಣ ಅಂತ ಸಂದರ್ಭ ಬಂದಾಗ ಹೇಳ್ತೀನಿ. ಅವರ ಮಾತುಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ" ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

   English summary
   I am confident of electing me by nomination from literature field said H Vishwanath in mysuru,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X