ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಎಚ್.ವಿಶ್ವನಾಥ್
ಮೈಸೂರು, ಡಿಸೆಂಬರ್ 4: ಕುರುಬ ಸಮುದಾಯದ ಎಸ್.ಟಿ. ಹೋರಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಾಯಕತ್ವ ವಹಿಸಲಿ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಆಹ್ವಾನ ನೀಡಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಎಂಎಲ್ಸಿ ಎಚ್.ವಿಶ್ವನಾಥ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕರೆಯುತ್ತಿರುವುದು ರಾಜಕೀಯ ನಾಯಕತ್ವಕ್ಕಲ್ಲ, ಸಮಾಜದ ನಾಯಕತ್ವಕ್ಕೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ನಾಯಕತ್ವ ವಹಿಸಿದರೆ ಕುರುಬ ಸಮುದಾಯ ನಿಮ್ಮ ಹಿಂದೆ ಬರಲಿದೆ ಎಂದು ಹೇಳಿದ ಮಾಜಿ ಸಚಿವ ಎಚ್.ವಿಶ್ವನಾಥ್, ಕುರುಬ ಸಮಾಜದ ಅಭಿವೃದ್ಧಿಗಾಗಿ ನಿಮ್ಮನ್ನು ಕರೆಯುತ್ತಿದ್ದೇವೆ ಎಂದು ತಿಳಿಸಿದರು.

ಈ ಹಿಂದೆ ಇಡೀ ಕುರುಬ ಸಮುದಾಯ ನಿಮ್ಮ ರಾಜಕೀಯ ಏಳಿಗೆಗೆ ತನು-ಮನ-ಧನ ಅರ್ಪಿಸಿದೆ. ಕುರಿ ಮಾರಿ ದುಡ್ಡು ಕೊಟ್ಟಿದ್ದಾರೆ. ಬೇರೆ ಸಮುದಾಯದವರೂ ನಿಮಗೆ ಬೆಂಬಲ ನೀಡಿದ್ದಾರೆ. ನೀವು ಕುರುಬ ಸಮುದಾಯಕ್ಕೆ ವಾಪಸ್ ಏನು ಕೊಟ್ಟಿರಿ? ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.
""ನಮ್ಮೆಲ್ಲರ ತ್ಯಾಗದಿಂದ ನೀವು ಮುಖ್ಯಮಂತ್ರಿಯಾದೀರಿ. ಆ ದೊಡ್ಡ ಮಟ್ಟಕ್ಕೆ ಬೆಳೆದಿರುವ ನೀವು ಕುರುಬ ಸಮುದಾಯದ ಎಸ್.ಟಿ ಹೋರಾಟದಲ್ಲಿ ಮುಂಚೂಣಿಯಲ್ಲಿರಬೇಕು. ಈ ಹೋರಾಟವನ್ನು ಆರ್‌ಎಸ್‌ಎಸ್ ಹೈಜಾಕ್ ಮಾಡುತ್ತಿದೆ ಎಂದಾಗಲಿ ಅಥವಾ ತಮ್ಮ ನಾಯಕತ್ವವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಭಾವಿಸಬಾರದು'' ಎಂದರು.
""ಒಂದು ವೇಳೆ ನಿಮ್ಮ ನಾಯಕತ್ವವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದಾದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಹಿರಿತನವನ್ನು ಬದಿಗಿಟ್ಟು ನೀವು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತಾ. ಆಗಲೇ ನಾನು ನಾಯಕತ್ವ ಬಿಟ್ಟುಕೊಟ್ಟಿದ್ದು, ಈಗಲೂ ಬಿಟ್ಟುಕೊಡುತ್ತೇವೆ. ನೀವು ಸೋತಿದ್ದಾಗ ನಾನು ಮಂತ್ರಿಯಾಗಿದ್ದೆ. ಆಗಲೂ ನೀವು ನಮ್ಮ ನಾಯಕ ಎಂದೇ ಕರೆಯುತ್ತಿದ್ದೆ'' ಎಂದು ಎಂಎಲ್ಸಿ ಎಚ್.ವಿಶ್ವನಾಥ್ ತಿಳಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications