• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಂ ಯಡಿಯೂರಪ್ಪ ಬದಲಾವಣೆ ಕುರಿತು ವಿಶ್ವನಾಥ್ ಮಹತ್ವದ ಹೇಳಿಕೆ!

|

ಮೈಸೂರು, ಅ. 21: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಕುರಿತು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಪಕ್ಷದಲ್ಲಿ ಕಿಡಿ ಹೊತ್ತಿಸಿದೆ. ಈ ವಿಚಾರವಾಗಿ ಪಕ್ಷದ ನಾಯಕರೇ ಇದೀಗ ಬಹಿರಂಗ ಹೇಳಿಕೆ ಕೊಡುತ್ತಿರುವುದು ರಾಜ್ಯ ಬಿಜೆಪಿ ನಾಯಕರಿಗೆ ಇರುಸುಮುರುಸು ಉಂಟುಮಾಡಿದೆ.

ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಶಾಸಕ ಯತ್ನಾಳ್ ಅವರ ಹೇಳಿಕೆ, ಕೇವಲ ಹೇಳಿಕೆಯಷ್ಟೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡುವ ವಿಚಾರ ಎಲ್ಲಿಯೂ ಪ್ರಸ್ತಾಪವಾಗಿಲ್ಲ. ನೂರಕ್ಕೆ ನೂರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಿದ್ದಾರೆ. ಸದ್ಯಕ್ಕೆ ಬದಲಾವಣೆ ವಿಷಯ ಇಲ್ಲ. ಯತ್ನಾಳ್ ಅವರ ಅನಿಸಿಕೆ, ಬಿಜೆಪಿಯವರ ಅನಿಸಿಕೆಯಲ್ಲ. ಪಕ್ಷದ ನಿರ್ಧಾರಗಳೇ ಬೇರೆ, ವೈಯಕ್ತಿಕ ಅಭಿಪ್ರಾಯಗಳೇ ಬೇರೆ ಎಂದು ಮೈಸೂರಿನಲ್ಲಿ ಎಂಎಲ್‌ಸಿ ಎಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

English summary
MLC H Vishwanath's reaction to the BJP Senior MLA Basanagouda Patil Yatnal's public statement on Chief Minister's change in Karnataka. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X