ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ಯಾಸ್ ಸಿಲಿಂಡರ್ ಬೆಲೆ 1 ಸಾವಿರ ರೂಪಾಯಿಯಾಗಲಿದೆ: ಎಚ್. ವಿಶ್ವನಾಥ್

By Yashaswini
|
Google Oneindia Kannada News

ಮೈಸೂರು, ಸೆಪ್ಟೆಂಬರ್.10 : ತೈಲ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ ಬುಡಮೇಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಮ್ಮ ಆಕ್ರೋಶ ಹೊರಹಾಕಿದರು.

ಮೈಸೂರಿನ ಗಾಂಧಿ ವೃತ್ತದ ಬಳಿ ಬಂದ್ ಗೆ ಬೆಂಬಲ ಸೂಚಿಸಿ ಜೆಡಿಎಸ್ ನಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ. ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ ಬುಡ ಮೇಲಾಗುತ್ತಿದೆ.

ಭಾರತ್ ಬಂದ್ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡ ಮಗುಭಾರತ್ ಬಂದ್ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡ ಮಗು

ಮುಂದಿನ ಕೆಲವೇ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ಆಗಲಿದೆ. ಕೆಲವು ದಿನಗಳ ಹಿಂದೆ ಶೋಭಾ ಕರಂದ್ಲಾಜೆ, ಸದಾನಂದಗೌಡ ಅವರು ಬೀದಿಗಿಳಿದು ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು ಪ್ರತಿಭಟನೆ ನಡೆಸಿದ್ದರು. ಈಗ ಅವರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ಕಿಡಿಕಾರಿದರು.

H Vishwanath says Price of gas cylinder will be Rs 1,000 in the next few days

ಮೋದಿಯವರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ. ಇವರನ್ನ ಒದ್ದು ಓಡಿಸಲು ಜನರು ಸಿದ್ಧರಾಗಿದ್ದಾರೆ. ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಧಂಗೆ ಏಳಲು ಜನ ನಿರ್ಧರಿಸಿದ್ದಾರೆ. ಸಾವಿರಾರು ಕೋಟಿಗಳನ್ನು ಲೂಟಿ ಹೊಡೆದು ಬೇರೆ ದೇಶಗಳಿಗೆ ಓಡಿಹೋದವರು ಬಿಜೆಪಿಯವರು.

ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿರುವ ಸರ್ಕಾರವಾಗಿದೆ. ಎಲ್ಲಾ ರಂಗಗಳಲ್ಲೂ ಸೋತಿರುವ ಬಿಜೆಪಿ ನಾಯಕರು ಮೊದಲು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಭಾರತ್ ಬಂದ್ LIVE: ಬೆಂಗಳೂರಿನಲ್ಲಿ ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ರಾಜಧಾನಿಭಾರತ್ ಬಂದ್ LIVE: ಬೆಂಗಳೂರಿನಲ್ಲಿ ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ರಾಜಧಾನಿ

ಬೆಲೆ ಏರಿಕೆಯಾದಾಗ ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಈಶ್ವರಪ್ಪ, ಯಡಿಯೂರಪ್ಪನವರು ಬಾಯಿ ಬಾಯಿ ಬಡೆದುಕೊಳ್ಳುತ್ತಿದ್ದರು. ಆದರೆ ಸದ್ಯ ಯಾವ ವೈಶಂಪಾಯನ ಸರೋವರದಲ್ಲಿ ಅವಿತಿದ್ದರೋ ಎಂದು ತಿಳಿಯದಾಗಿದೆ ಎಂದು ಲೇವಡಿ ಮಾಡಿದರು.

English summary
JDS State President H Vishwanath said Price rise is a testimony to the failure of the central BJP government. Price of gas cylinder will be Rs 1,000 in the next few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X