ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವನಾಥ್ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಸಿದ್ದರಾಮಯ್ಯ ವಿಶ್ವನಾಥ್ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಅವರಿಗೆ ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 26: ಮಾಜಿ ಸಂಸದ ಎಚ್. ವಿಶ್ವನಾಥ್ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರೆ ಎಂಬ ಗಾಳಿ ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಇದ್ದ ಹಾಗೆ. ಬಿಎಸ್ವೈ ವಾಣಿಜ್ಯ ತೆರಿಗೆ ಆಯುಕ್ತರಾಗಿದ್ದಾಯ್ತು.ಈಗ ಚುನಾವಣಾ ಆಯುಕ್ತರಾಗಲು ಹೊರಟಿದ್ದಾರೆ," ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಅವಧಿಗೂ ಮುನ್ನ ಮುನ್ನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಬಿಎಸ್ ವೈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.[ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ ಎಚ್.ವಿಶ್ವನಾಥ್]

H Vishwanath will remain in Congress – Siddaramaiah

ಯಡಿಯೂರಪ್ಪ ಮಹಾನ್ ಸುಳ್ಳುಗಾರ

ಕಾಂಗ್ರೆಸ್ ಸರ್ಕಾರ ಉರುಳುತ್ತೆ. ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆಯುತ್ತೆ ಎಂದು ಹೇಳಲು ಬಿಎಸ್ ಯಡಿಯೂರಪ್ಪ ಏನು ಚುನಾವಣಾ ಆಯುಕ್ತರಾ? ಅವರು ಮಹಾನ್ ಸುಳ್ಳುಗಾರ. ಅವರು ಹೇಳಿದ್ದು ಯಾವುದೂ ನಡೆದಿಲ್ಲ. 2018 ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತದೆ. ಅಲ್ಲಿಯವರೆಗೂ ನಾವೇ ಅಧಿಕಾರದಲ್ಲಿರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಿಂದ ಅನುದಾನದಲ್ಲಿ ತಾರತಮ್ಯ

ಇನ್ನು ಪ್ರಧಾನಿ ಮೋದಿ ಭೇಟಿ ‌ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ಕೇಂದ್ರದ ಅನುದಾನದಲ್ಲಿ ಬಹಳ ಕಡಿತ ಮಾಡಿದ್ದಾರೆ. ರಾಜ್ಯದ ಹೆಚ್ಚಿನ ಪ್ರದೇಶ ಬರಪೀಡಿತ ಪ್ರದೇಶವಾಗಿದ್ದರೂ, ನಮಗಿಂತ ಸಣ್ಣ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿದ್ದಾರೆ," ಎಂದು ಆರೋಪಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ 4702 ಕೋಟಿ‌ ಕೇಳಿದ್ದೆವು. ಆದರೆ 1685 ಕೋಟಿ‌ ಮಾತ್ರ ಕೊಟ್ಟಿದ್ದು, 3310 ಕೋಟಿ ಮುಂಗಾರು ‌ಹಣ ನೀಡಿ ಅಂದಿದ್ದೇವೆ. ಆದರೆ, ಪ್ರಧಾನಿ ಅವರಿಂದ ಪ್ರತಿಕ್ರಿಯೆ ಇಲ್ಲ ಎಂದರು. ಹಾಗೆಯೇ ಜಿಎಸ್ ಟಿ ಮಸೂದೆ ಬಗ್ಗೆ ನಮ್ಮ ವಿರೋಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.[ಮೇ 10 ರಂದು ಎಚ್.ವಿಶ್ವನಾಥ್ ಜೆಡಿಎಸ್ ಗೆ?!]

ದೆಹಲಿಯಲ್ಲಿ ನಾವು ಗೆಲ್ತೀವಿ ಅಂತಾ ಹೇಳಿಲ್ಲ

ದೆಹಲಿ‌ ನಾವು ಗೆಲ್ತೀವಿ ಅಂತ ಹೇಳಿರಲಿಲ್ಲ. ನಿರೀಕ್ಷೆ ಇಟ್ಟುಕೊಂಡಿದ್ದೆಉ, ಆದರೆ ಪ್ರಗತಿ ಸಾಧಿಸಿದ್ದೇವೆ ಎಂದು ಎಂಸಿಡಿ ಸುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇನ್ನು ನಾವು ಬಿಜೆಪಿಗೆ ಹೆದರಿ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಟ್ಟಿದ್ದಲ್ಲ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು. ಸಾವರ್ಜನಿಕರು ಹಾಗೂ ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ಸ್ಟೀಲ್ ಬ್ರಿಡ್ಜ್ ಯೋಜನೆಗೆ ವಿರೋಧ ವ್ಯಕ್ತ ಪಡಿಸಿತ್ತು. ಹೀಗಾಗಿ ಕೈಬಿಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ವಿಶ್ವನಾಥ್ ಪಕ್ಷ ಬಿಟ್ಟು ಹೋಗಿಲ್ಲ

ವಿಶ್ವನಾಥ್ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಅವರಿಗೆ ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವನಾಥ್ ಪಕ್ಷ ತೊರೆಯುತ್ತಾರೆ ಎಂಬ ವದಂತಿ ಕುರಿತಂತೆ ಪ್ರತಿಕ್ರಿಯಿಸಿದ ಅವರು ನಾನು ಇದುವರೆಗೂ ವಿಶ್ವನಾಥ್ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ.ಈ ವಿಚಾರವನ್ನು ಅವರೇ ಸಾಕಷ್ಟು ಬಾರಿ ಹೇಳಿದ್ದಾರೆ ಎಂದು ಹೇಳಿ ಅವರು ಪಕ್ಷ ಬಿಡುವುದಿಲ್ಲ ಎಂಬುದನ್ನು ಸಮರ್ಥಿಸಿಕೊಂಡರು.

English summary
“Former Mysuru parliament member H Vishwanath will remain in Congress,” Said chief minister Siddaramaiah in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X