ಮೈಸೂರು ಜಿಲ್ಲೆ ವಿಭಜನೆಗೆ ಎಚ್ ವಿಶ್ವನಾಥ್ ಒತ್ತಾಯ
Recommended Video
ಮೈಸೂರು, ಅಕ್ಟೋಬರ್ 14: ಮತ್ತೆ ಕರ್ನಾಟಕದಲ್ಲಿ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದೆ. ಮೈಸೂರು ಜಿಲ್ಲೆ ವಿಭಜನೆಯಾಗಬೇಕು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.
ಈಗಾಗಲೇ ವಿಜಯನಗರ, ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಬೇಕು ಎಂದು ಹೋರಾಟಗಳು ಆರಂಭವಾಗಿರುವ ಬೆನ್ನಲ್ಲೇ ಹುಣಸೂರು ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಬೇಕು.ಮೈಸೂರಿನಿಂಸ ಬೇರ್ಪಡಿಸಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.
ಮೈಸೂರನ್ನು ಇಬ್ಭಾಗ ಮಾಡಬೇಕೆಂದು ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಎಚ್ ವಿಶ್ವನಾಥ್ ಆಗ್ರಹಿದ್ದಾರೆ. ಅಲ್ಲದೆ ಪ್ರತ್ಯೇಕ ಜಿಲ್ಲೆಗೆ ಒಂದು ಹೋರಾಟ ಸಮಿತಿ ರಚಿಸಿ ಹೋರಾಟ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ.

ಈ ಹಿಂದೆ ಅಖಂಡ ಬಳ್ಳಾರಿ ಜಿಲ್ಲೆ ಉಳಿಯಬೇಕೆಂದು ಶಾಸಕ ಸೋಮಶೇಖರ್ ರೆಡ್ಡಿ, ಕುರಣಾಕರರೆಡ್ಡಿ, ಸಚಿವ ಶ್ರೀರಾಮುಲು ಪಟ್ಟು ಹಿಡಿದಿದ್ದರು. ಇನ್ನೊಂದೆಡೆ ಅನರ್ಹ ಶಾಸಕ ಆನಂದಸಿಂಗ್, ಕೆಸಿ ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಅವರು ವಿಜಯನಗರ ಜಿಲ್ಲೆಯ ರಚನೆ ಆಗಲೇಬೇಕೆಂದು ಸಿಎಂ ಬಿಎಸ್ ವೈ ಮೇಲೆ ಒತ್ತಡ ಹೇರಿದ್ದರು.
ಹುಣಸೂರು ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು. ಹೊಸ ಜಿಲ್ಲೆಗೆ ಡಿ.ದೇವರಾಜ ಅರಸ್ ಜಿಲ್ಲೆ ಹೆಸರಿಡಬೇಕು. ಹೊಸ ಜಿಲ್ಲೆ ವ್ಯಾಪ್ತಿಗೆ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಜೊತೆ ಹೊಸ ತಾಲೂಕು ಸರಗೂರು ಹಾಗೂ ಸಾಲಿಗ್ರಾಮ ಸೇರಿಸಿ ಒಂದು ಜಿಲ್ಲೆ ಮಾಡಬೇಕು ಎಂಬ ಪ್ರಸ್ತಾವನೆಯನ್ನ ಸರ್ಕಾರದ ಮುಂದೆ ಇಟ್ಟಿದ್ದಾರೆ.












Click it and Unblock the Notifications