ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.20ರಿಂದ ಡಿ.6ರವರೆಗೆ ಮೈಸೂರಿನಲ್ಲಿ ವಿಶೇಷ ಕೈಮಗ್ಗ ಉತ್ಪನ್ನಗಳ ಮೇಳ

|
Google Oneindia Kannada News

ಮೈಸೂರು, ನವೆಂಬರ್ 18: ಕೊರೊನಾ ಸೋಂಕು ಬಾರದೆ ಹೋಗಿದ್ದರೆ ಇಷ್ಟು ಹೊತ್ತಿಗೆ ದಸರಾ ವಸ್ತು ಪ್ರದರ್ಶನ ನಡೆಯುತ್ತಿತ್ತು. ಜನ ಸಂಭ್ರಮದಿಂದ ತಮಗೆ ಬೇಕಾದ, ಅದರಲ್ಲೂ ಕೈಮಗ್ಗದ ಉತ್ಪನ್ನಗಳನ್ನು ಮುಗಿಬಿದ್ದು ಖರೀದಿಸುತ್ತಿದ್ದರು.

ಈ ಬಾರಿ ಅದ್ಯಾವುದೂ ಇಲ್ಲದಾಗಿದೆ. ಹೀಗಾಗಿ ಜನರ ಅಗತ್ಯತೆಯನ್ನರಿತು ನವದೆಹಲಿಯ ಜವಳಿ ಮಂತ್ರಾಲಯದ ಸಹಯೋಗದೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಕೈಮಗ್ಗ ಮೇಳ ಸಂಸ್ಕೃತಿ-2020 ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೈಸೂರಿನ ಜೆಎಸ್ ಎಸ್ ಮೈಸೂರು ಅರ್ಬನ್ ಹಾತ್ ‌ನಲ್ಲಿ ಹಮ್ಮಿಕೊಂಡಿದೆ. ನವೆಂಬರ್ 20 ರಿಂದ ಡಿಸೆಂಬರ್ 6ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ಹತ್ತು ಹಲವು ವಿಶೇಷತೆಗಳ ಉತ್ಪನ್ನಗಳು ಗಮನ ಸೆಳೆಯಲಿವೆ.

 ನೇಕಾರರ ಕುಟುಂಬಗಳಿಗೆ ಉತ್ತೇಜನ

ನೇಕಾರರ ಕುಟುಂಬಗಳಿಗೆ ಉತ್ತೇಜನ

ನೇಕಾರರು, ನೇಕಾರರ ಸಹಕಾರ ಸಂಘಗಳು ತಯಾರು ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳು ಹೆಚ್ಚು ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಹಾಗೂ ಕೈಮಗ್ಗ ಉತ್ಪನ್ನಗಳು ನಶಿಸಿ ಹೋಗದಂತೆ ಕಾಪಾಡಿಕೊಂಡು ಹೋಗಲು ಈ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ವೃತ್ತಿಯನ್ನು ಅವಲಂಬಿಸಿ ಜೀವನ ನಿರ್ವಹಣೆ ಮಾಡುತ್ತಿರುವ ನೇಕಾರರ ಕುಟುಂಬಗಳಿಗೆ ಉತ್ತೇಜಿಸಿ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸಿ ಪ್ರಾಕಾರಗಳಿಗೆ ಕೈಮಗ್ಗ ಉತ್ಪನ್ನಗಳ ಅರಿವು ಮೂಡಿಸಿ ಉತ್ಪನ್ನಗಳನ್ನು ಬಳಸಲು ಮೇಳದ ಮೂಲಕ ಅವಕಾಶ ಮಾಡಿಕೊಡಲಾಗುತ್ತಿದೆ.

ಲಾಕ್ ಡೌನ್ ತೆರವಿನ ಬಳಿಕ ಪ್ರಥಮ ಬಾರಿಗೆ ಮೈಸೂರಿನಲ್ಲಿ ಕರಕುಶಲ ಮೇಳಲಾಕ್ ಡೌನ್ ತೆರವಿನ ಬಳಿಕ ಪ್ರಥಮ ಬಾರಿಗೆ ಮೈಸೂರಿನಲ್ಲಿ ಕರಕುಶಲ ಮೇಳ

 ಹೊರ ಜಿಲ್ಲೆ, ರಾಜ್ಯಗಳ ಉತ್ಪನ್ನಗಳ ಪ್ರದರ್ಶನ

ಹೊರ ಜಿಲ್ಲೆ, ರಾಜ್ಯಗಳ ಉತ್ಪನ್ನಗಳ ಪ್ರದರ್ಶನ

ಈ ವಿಶೇಷ ಕೈಮಗ್ಗ ಮೇಳದಲ್ಲಿ ಉತ್ತರ ಭಾರತದ ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಗದಗ, ಬಾಗಲಕೋಟೆ, ಗುಲ್ಬರ್ಗ ಮತ್ತು ಇಳಕಲ್ ಪ್ರದೇಶದ ಕೈಮಗ್ಗ ನೇಕಾರ ಸಹಕಾರಿ ಸಂಘಗಳಲ್ಲಿ ಕೈಮಗ್ಗ ನೇಕಾರರು ತಯಾರಿಸಿದ ರೇಷ್ಮೆ, ಹತ್ತಿ ಮತ್ತು ಉಣ್ಣೆ ಹಾಗೂ ವಿವಿಧ ಮಿಶ್ರಿತ ನೂಲುಗಳಿಂದ ತಯಾರಿಸಲಾದ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶನಕ್ಕಿಡಲಾಗಿದೆ.

 ಹೆಣ್ಮಕ್ಕಳ ಮನ ಸೆಳೆಯಲಿರುವ ಸೀರೆಗಳು

ಹೆಣ್ಮಕ್ಕಳ ಮನ ಸೆಳೆಯಲಿರುವ ಸೀರೆಗಳು

ಈ ಮೇಳಕ್ಕೊಂದು ಸುತ್ತು ಹೊಡೆದರೆ ಹೆಣ್ಮಕ್ಕಳನ್ನು ರೇಷ್ಮೆ ಸೀರೆ, ಮೊಳಕಾಲ್ಮೂರು ಸೀರೆ, ಇಳಕಲ್ ಸೀರೆ, ಕಸೂತಿ ಸೀರೆ, ತಮಿಳುನಾಡಿನ ಕಂಜಿವರಮ್ ಸೀರೆ, ಬಿಹಾರದ ತಷರ್ ಸೀರೆ, ಕಾಂತ ಸೀರೆ, ಬಲಚುರಿ ಸೀರೆ, ಬುಟಿಕ್ ಸೀರೆ, ಪಶ್ಚಿಮಬಂಗಾಳದ ಬೆಂಗಾಲಿ ಕಾಟನ್ ಸೀರೆ, ಉತ್ತರಪ್ರದೇಶದ ಬನಾರಸ್ ಸೀರೆ, ಚಿಕನ್ ಎಂಬ್ರಾಯ್ಡಿರಿ ಸೀರೆ, ಮಧ್ಯಪ್ರದೇಶದ ಚಂದೇರಿ, ಮಹೇಶ್ವರಿ ಸೀರೆ, ಒರಿಸ್ಸಾ ರಾಜ್ಯದ ಸಂಬಲ್ ‌ಪುರಿ ಸೀರೆ, ಇಕ್ಕತ್, ಬೊಂಕಾಯಿ ಸೀರೆ, ಕಾಶ್ಮೀರ ರಾಜ್ಯದ ಪಶ್ಮಿನಾ ಶಾಲ್, ಆಂದ್ರಪ್ರದೇಶದ ಗೊದ್ ‌ವಾಲ್ ರೇಷ್ಮೇ ಸೀರೆ, ಕಲ್ಮಕಾರಿ ಸೀರೆ, ಪೊಚಂಪಲ್ಲಿ ಸೀರೆಗಳು ಮತ್ತು ಮಧುರೈ ಟೈ ಅಂಡ್ ಡೈ, ಗುಜರಾತ್ ರಾಜ್ಯದ ಪಟೋಲ ರೇಷ್ಮೆ ಸೀರೆಗಳು ಇತರೆ ಎಲ್ಲಾ ರಾಜ್ಯದ ರೇಷ್ಮೆ ಹಾಗೂ ಕಾಟನ್ ಸೀರೆಗಳು ಆಕರ್ಷಿಸುತ್ತವೆ. ಇದಲ್ಲದೆ ಡ್ರೆಸ್ ಮೆಟೀರಿಯಲ್ ಗಳು, ಕಸೂತಿ ವಸ್ತ್ರಗಳು, ಟವಲ್ ‌ಗಳು, ಮೇಲು ಹಾಸು ಮತ್ತು ಹೊದಿಕೆಗಳು, ನೆಲಹಾಸು ಮತ್ತು ಇತರೆ ಕೈಮಗ್ಗ ಉತ್ಪನ್ನಗಳು ಇಲ್ಲಿವೆ.

 ಮೇಳದಲ್ಲಿ ಕೋವಿಡ್-19ರ ನಿಯಮ ಪಾಲನೆ

ಮೇಳದಲ್ಲಿ ಕೋವಿಡ್-19ರ ನಿಯಮ ಪಾಲನೆ

ಮೇಳದ ಅವಧಿಯಲ್ಲಿ ಕೋವಿಡ್-19ನ ಸರ್ಕಾರದ ಹಾಗೂ ಆಡಳಿತ ಮಂಡಳಿಯ ನಿಯಮಗಳಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು, ಕಳೆದ ಸೆಪ್ಟೆಂಬರ್ ‌ನಲ್ಲಿ ಕೋವಿಡ್-19 ಲಾಕ್ ಡೌನ್ ಸಡಿಸಿಲಿಸಿದ ನಂತರ ಪ್ರಪ್ರಥಮವಾಗಿ ದೇಶದಲ್ಲೇ ಮೊದಲು ಜೆಎಸ್ ‌ಎಸ್ ಮೈಸೂರು ಅರ್ಬನ್ ಹಾತ್ ‌ನಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಎರಡನೇ ಬಾರಿಗೆ ಮೇಳ ನಡೆಯುತ್ತಿರುವುದು ವಿಶೇಷವಾಗಿದೆ.

English summary
The Handloom exhibition and Sales Fair is held at JSS Mysuru Urban Hath at Mysuru. The event will be held from November 20 to December 6
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X