ಮುಂದಿನ ದಿನಗಳಲ್ಲಿ ಹನುಮ ಜಯಂತಿ ಮಾಡಿಯೇ ಸಿದ್ಧ: ಸಿಂಹ

ಮೈಸೂರು, ಡಿಸೆಂಬರ್ 6: ಮೈಸೂರಿನ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ವಿವಾದ ಬಳಿಕ ಮೈಸೂರು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರ ಹಾಗೂ ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ತಮ್ಮ ಮಾತಿನಿಂದ ತಿವಿಯುತ್ತಿದ್ದಾರೆ.

ಹನುಮ ಮಾಲೆ ಧರಿಸಿದ್ದ ಪ್ರತಾಪ್ ಸಿಂಹ ಇಂದು (ಬುಧವಾರ ವಿಸರ್ಜಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಮುಂದಿನ ದಿನಗಳಲ್ಲಿ ಹನುಮ ಜಯಂತಿ ಮಾಡಿಯೇ ಸಿದ್ಧ" ಎಂದು ತಮ್ಮ ದಾಟಿಯಲ್ಲಿಯೇ ರಾಜ್ಯ ಸರ್ಕಾರ ಮತ್ತು ಮೈಸೂರು ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡರು.

Hanuma Jayanti celebrating in upcoming days Says MP Pratap Simha

ನಮ್ಮ ನಂಬಿಕೆ ಮೇಲೆ ಪ್ರಹಾರ ಮಾಡುವ ಕೆಲಸವಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಂಯಮ ಇಟ್ಟುಕೊಳ್ಳಿ ಎಂದು ಪರೋಕ್ಷವಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಕಿಡಿಕಾರಿದರು.

ಅಧಿಕಾರದ ದರ್ಪದಿಂದ ಮೆರೆಯಬಾರದು. ದುಷ್ಟ ಶಕ್ತಿಗಳನ್ನು ಶಿಕ್ಷಿಸುವ ಕೆಲಸ ಆ ದೇವರೇ ಮಾಡುತ್ತಾನೆ ಎಂದರು.

ಇತ್ತೀಚೆಗೆ ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ತಡೆದು ಪೊಲೀಸರು ಬಂಧಿಸಿದ್ದರು. ಇದರಿಂದ ಕೆರಳಿದ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವಿರುದ್ಧ ಮಾತಿನ ಚಾಟಿ ಬೀಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+