ಪ್ರತಾಪ್ ಸಿಂಹ ಬಿಡುಗಡೆ, ಡಿ 4.ರಂದು ಹುಣಸೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಮೈಸೂರು, ಡಿಸೆಂಬರ್ 04 : ಜಿಲ್ಲೆಯ ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆ ಗಲಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 4ರಂದು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹುಣಸೂರಿನಲ್ಲಿ ಇಂದು ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಡಿಡಿಪಿಐ ಮತ್ತು ಡಿಡಿಪಿಯು ಅವರಿಗೆ ಸೂಚಿಸಿದ್ದಾರೆ.

ಭಾನುವಾರ ಹುಣಸೂರಿನಲ್ಲಿ ನಿಷೇಧಾಜ್ಞೆ ನಡುವೆಯೂ, ಹನುಮ ಜಯಂತಿ ಮೆರವಣಿಗೆ ಕೈಗೊಂಡಿದ್ದರಿಂದ ಪೊಲೀಸರು ತಡೆದಿದ್ದು, ಇದರಿಂದಾಗಿ ಕಲ್ಲು ತೂರಾಟ ನಡೆದೆ.
ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ ನಡೆಸಿದ್ದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಭಾನುವಾರ ರಾತ್ರಿ ಬಿಡುಗಡೆ ಮಾಡಿದ್ದಾರೆ.












Click it and Unblock the Notifications