Kingfisher Beer Seized:ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ, 25 ಕೋಟಿ ಮೌಲ್ಯದ ಮದ್ಯ ವಶ
ಮೈಸೂರು, ಆಗಸ್ಟ್ 16: ಯುವಜನತೆಯ ಅತೀ ಆಕರ್ಷಣೀಯ ಹಾಗೂ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಪರಿಣಾಮ 25 ಕೋಟಿ ಮೌಲ್ಯದ 78,678 ಬಾಕ್ಸ್ ಬಿಯರ್ ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರಿವರಿಸ್ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದ್ದು, 7e ಮತ್ತು 7c ನಮೂನೆಯ ದಿನಾಂಕ 15-07-23ರಂದು ಬಾಟಿಲಿಂಗ್ ಆದ ಬಿಯರ್‌ನಲ್ಲಿ ಈ ಸೆಡಿಮೆಂಟ್ ಅಂಶ ಕಂಡುಬಂದಿದೆ.

ಈ ಮಾಹಿತಿ ತಿಳಿದ ಕೂಡಲೇ ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈ ಕುರಿತು 2-08-2023ರಂದು ಕೆಮಿಕಲ್ ವರದಿ ಬಂದಿದ್ದು, ವರದಿಯಲ್ಲಿ ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಅಂದರೆ ಮಾನವರ ಸೇವನೆಗೆ ಯೋಗ್ಯವಲ್ಲ ಎಂದು ತಿಳಿಸಲಾಗಿದೆ.
ಈ ಅವಧಿಯಲ್ಲಿ ಒಟ್ಟು 78,678 ಬಾಕ್ಸ್ ಬಿಯರ್ ಬಾಕ್ಸ್ ಸರಬರಾಜಾಗಿತ್ತು. ಅಷ್ಟರ ವೇಳೆಗೆ ಎಲ್ಲಾ ಬಾಕ್ಷ್‌ಗಳನ್ನು ತಡೆಹಿಡಿಯಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿತ್ತು. ಹೀಗಾಗಿ ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ. ಜೊತೆಗೆ ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಇನ್ ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ವರದಿಯಲ್ಲಿ ಈ ಬಿಯರ್ ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಬಂದ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ತಿಳಿಸಿದ್ದಾರೆ.












Click it and Unblock the Notifications