ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಣಸೂರಿನಲ್ಲಿ ಕಾಂಗ್ರೆಸ್‌ ಗೆಲ್ಲಿಸುವ ಹೊಣೆ ಮಹದೇವಪ್ಪ ಹೆಗಲಿಗೆ

|
Google Oneindia Kannada News

Recommended Video

ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್‌ಗೆ ಸಮನ್ಸ್‌ | D K Shivakumar | Oneindia Kannada

ಮೈಸೂರು, ಸೆಪ್ಟೆಂಬರ್ 18 : ಕರ್ನಾಟಕ ಕಾಂಗ್ರೆಸ್ 17 ಕ್ಷೇತ್ರಗಳ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿರುವ ಪಕ್ಷ ಎಲ್ಲಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರಕ್ಕೆ ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಉಸ್ತುವಾರಿಯಾಗಿದ್ದಾರೆ. ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ ಅನರ್ಹಗೊಂಡಿರುವ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದರೆ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ತಂತ್ರ ರೂಪಿಸಿದೆ.

ಸಿದ್ದರಾಮಯ್ಯ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಚ್.ಸಿ.ಮಹದೇವಪ್ಪಸಿದ್ದರಾಮಯ್ಯ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಚ್.ಸಿ.ಮಹದೇವಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಣಸೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದಲೇ ತಮ್ಮ ಆಪ್ತರಾದ ಎಚ್. ಸಿ. ಮಹದೇವಪ್ಪರನ್ನು ಉಸ್ತುವಾರಿಯಾಗಿ ನೇಮಿಸಿದ್ದು, ಪಕ್ಷದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಸೂಚನೆ ಕೊಟ್ಟಿದ್ದಾರೆ.

ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ : ಎಚ್.ಸಿ.ಮಹದೇವಪ್ಪನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ : ಎಚ್.ಸಿ.ಮಹದೇವಪ್ಪ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಹೂಣಸೂರು ಕ್ಷೇತ್ರದ ಪ್ರಮುಖ ನಾಯಕರ ಸಭೆ ನಡೆಸಿದ್ದಾರೆ. ಉಪ ಚುಣಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದಾರೆ.

ಚುನಾವಣಾ ರಾಜಕೀಯ ಸಾಕಾಗಿದೆ, ಮತ್ತೆ ಬರಲ್ಲ ಎಂದ ವಿಶ್ವನಾಥ್ಚುನಾವಣಾ ರಾಜಕೀಯ ಸಾಕಾಗಿದೆ, ಮತ್ತೆ ಬರಲ್ಲ ಎಂದ ವಿಶ್ವನಾಥ್

ಕಡಿಮೆ ಅಂತರದ ಸೋಲು

ಕಡಿಮೆ ಅಂತರದ ಸೋಲು

2018ರ ವಿಧಾನಸಭೆ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರ 8575 ಮತಗಳ ಅಂತರದಲ್ಲಿ ಕಾಂಗ್ರೆಸ್ ಕೈ ತಪ್ಪಿತ್ತು. ಎಚ್‌. ಪಿ. ಮಂಜುನಾಥ್ ಜೆಡಿಎಸ್‌ನ ಎಚ್. ವಿಶ್ವನಾಥ್ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಬೇಕು ಎಂಬುದು ಸಿದ್ದರಾಮಯ್ಯ ನಿರೀಕ್ಷೆ. ಆದ್ದರಿಂದ, ತಮ್ಮ ಆಪ್ತರಾದ ಎಚ್. ಸಿ. ಮಹದೇವಪ್ಪರನ್ನು ಉಸ್ತುವಾರಿಯನ್ನಾಗಿ ಮಾಡಿದ್ದಾರೆ.

ಅಭ್ಯರ್ಥಿ ಅಂತಿಮಗೊಂಡಿದೆ

ಅಭ್ಯರ್ಥಿ ಅಂತಿಮಗೊಂಡಿದೆ

ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಹುಣಸೂರು ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದೆ. ಎಚ್. ಪಿ. ಮಂಜುನಾಥ್‌ಗೆ ಟಿಕೆಟ್ ಸಿಗುವುದು ಖಚಿತವಾಗಿದ್ದು, ಚುನಾವಣಾ ಕೆಲಸ ಆರಂಭಿಸುವಂತೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ 2 ಬಾರಿ ಗೆದ್ದಿರುವ ಮಂಜುನಾಥ್ ಕಳೆದ ಚುನಾವಣೆಯಲ್ಲಿ ಸೋತಿದ್ದರು.

ಎಚ್. ಸಿ. ಮಹದೇವಪ್ಪ ಸಭೆ

ಎಚ್. ಸಿ. ಮಹದೇವಪ್ಪ ಸಭೆ

ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹುಣಸೂರು ಕ್ಷೇತ್ರಕ್ಕೆ ಎಚ್. ಸಿ. ಮಹದೇವಪ್ಪ ಉಸ್ತುವಾರಿಯಾಗಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಪ್ರಮುಖ ನಾಯಕರ ಸಭೆಗಳನ್ನು ಅವರು ನಡೆಸಿದ್ದು, ಚುನಾವಣೆ ಗೆಲ್ಲಲು ತಂತ್ರ ರೂಪಿಸುತ್ತಿದ್ದಾರೆ.

ಶೀಘ್ರದಲ್ಲಿಯೇ ಸಮಾವೇಶ

ಶೀಘ್ರದಲ್ಲಿಯೇ ಸಮಾವೇಶ

ಹುಣಸೂರಿನಲ್ಲಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಸಮಾವೇಶ ನಡೆಸಲಾಗುತ್ತದೆ. ಎಚ್. ಸಿ. ಮಹದೇವಪ್ಪ ಸಮಾವೇಶ ನಡೆಸುವ ದಿನಾಂಕವನ್ನು ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ. ಈ ಬಾರಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ.

ಕಳೆದ ಚುನಾವಣೆ ಫಲಿತಾಂಶ

ಕಳೆದ ಚುನಾವಣೆ ಫಲಿತಾಂಶ

2018ರ ಚುನಾವಣೆಯಲ್ಲಿ ಎಚ್. ವಿಶ್ವನಾಥ್ 91,667 ಮತಗಳನ್ನು ಪಡೆದು ಗೆದ್ದಿದ್ದರು. ಕಾಂಗ್ರೆಸ್‌ನ ಎಚ್. ಪಿ. ಮಂಜುನಾಥ್ 83,092 ಮತಗಳನ್ನು ಪಡೆದಿದ್ದರು. ಈ ಬಾರಿ ಯಾವುದೇ ಕಾರಣಕ್ಕೂ ಕ್ಷೇತ್ರ ಕೈ ತಪ್ಪಬಾರದು ಎಂದು ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಸಿದ್ಧತೆಯನ್ನು ಆರಂಭಿಸಿದೆ. ಅನುಭವಿಯಾದ ಎಚ್. ಸಿ. ಮಹದೇವಪ್ಪರನ್ನು ಉಸ್ತುವಾರಿಯಾಗಿ ನೇಮಕ ಮಾಡಿದೆ.

English summary
Former minister Dr. H.C.Mahadevappa appointed as in-charge for Hunsur assembly seat by poll. Hunsur MLA and JD(S) leader H. Vishwanath disqualified by speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X