• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡಲ್ ವರದಿಯ ವಿರುದ್ಧ ಕಮಂಡಲ ಹಿಡಿದ ಕೆಟ್ಟ ಮನಸ್ಸುಗಳು - ಡಾ.ಹೆಚ್.ಸಿ.ಮಹದೇವಪ್ಪ

|
Google Oneindia Kannada News

ಮೈಸೂರು, ಸೆ 9: "ಹಿಂದುಳಿದ ಜನಾಂಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಉದ್ದೇಶದಿಂದ ರೂಪಿಸಲಾದ ಕಾಕಾ ಕಾಲೇಕರ್ ವರದಿ, ಮಂಡಲ್ ವರದಿ ಹಾಗೂ ಹಾವನೂರು ವರದಿಯನ್ನು ಜಾರಿಗೊಳಿಸುವಾಗ ಯಾರೆಲ್ಲಾ ಮತ್ತು ಯಾವ ಕಾರಣಕ್ಕೆ ನೆಪ ಹೇಳುತ್ತಿದ್ದರು ಎಂದು ಎಲ್ಲರಿಗೂ ತಿಳಿದಿದೆ" ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

"ಮಂಡಲ್ ವರದಿಯ ವಿರುದ್ಧ ಕಮಂಡಲ ಹಿಡಿದ ಕೆಟ್ಟ ಮನಸ್ಸುಗಳೇ ಈಗಲೂ ಕೂಡಾ ಕಾಂತರಾಜ್ ವರದಿ ಜಾರಿಗೆ ವಿರುದ್ಧವಾಗಿದೆ. ಅದರಲ್ಲೂ ನೂರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜಾತಿ ಗಣತಿಗೆ ಸಂಬಂಧಿಸಿದ ಕಾಂತರಾಜ್ ವರದಿಗೆ ಬೇಕಾದ ಸಂಬಂಧಿಸಿದ ದತ್ತಾಂಶವನ್ನು ಸಿದ್ಧಪಡಿಸಲಾಯಿತು" ಎಂದು ಮಹದೇವಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.

ಕುದುರೆ ಇದ್ದಾಗಲೇ ಏರಲಿಲ್ಲ; ಕುಮಾರಸ್ವಾಮಿ ಟ್ವೀಟ್ ಬಾಣ! ಕುದುರೆ ಇದ್ದಾಗಲೇ ಏರಲಿಲ್ಲ; ಕುಮಾರಸ್ವಾಮಿ ಟ್ವೀಟ್ ಬಾಣ!

"ಆದರೆ, ಆ ದತ್ತಾಂಶವನ್ನು ಸೂಕ್ತವಾಗಿ ವಿಶ್ಲೇಷಿಸಿ ವರದಿಯನ್ನು ಸಿದ್ಧಪಡಿಸುವ ವೇಳೆಗೆ ಕಾಂಗ್ರೆಸ್ ಸರ್ಕಾರ ಬದಲಾಗಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಂದಿತು. ಹೀಗಾಗಿ, ಬಹುಶಃ ಕಾಂತರಾಜ್ ಆಯೋಗದ ವರದಿಯ ಜಾರಿಯ ಬಗ್ಗೆ ಈಗ ಸುಳ್ಳು ಹೇಳುತ್ತಿರುವ ಇವರಿಗೂ ಕೂಡಾ ತಮ್ಮ ಅವಧಿಯಲ್ಲೇ ಆ ವರದಿಯನ್ನು ಸಿದ್ಧಪಡಿಸಿ ಜಾರಿಗೊಳಿಸಬಹುದಿತ್ತೆಂಬ ಸಂಗತಿಯು ಗೊತ್ತಿದ್ದರೂ ಕೂಡಾ ವರದಿ ಜಾರಿ ಮಾಡದೇ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ನಿಜಕ್ಕೂ ಬೇಜವ್ದಾರಿ ತನವಾಗಿದೆ" ಎಂದು ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

"ಇನ್ನು ವರದಿಯನ್ನು ಸಿದ್ದಪಡಿಸಲು ಹಣಕಾಸನ್ನು ಒದಗಿಸಿ ದತ್ತಾಂಶವನ್ನು ಸಂಗ್ರಹಿಸಿ ಅಂತಿಮ ವರದಿ ಸಿದ್ದಪಡಿಸುವುದಕ್ಕೆ ಪೂರಕವಾಗಿ ಕೆಲಸ ಮಾಡಿದ್ದ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ".

"ಈ ನಿಟ್ಟಿನಲ್ಲಿ ಸರ್ಕಾರದ ಮುಖ್ಯಸ್ಥರ ಜವಾಬ್ದಾರಿ ಹೊತ್ತಿದ್ದ ತಾವುಗಳು ಸುಳ್ಳು ಮಾಹಿತಿಯನ್ನು ಹರಡುವಂತಹ ಬೇಜವಾಬ್ದಾರಿ ಕೆಲಸವನ್ನು ಮಾಡಬಾರದೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ" ಎಂದು ಮಹದೇವಪ್ಪನವರು ಹೇಳಿದ್ದಾರೆ. ಏನಿದು ಕುಮಾರಸ್ವಾಮಿ ಆರೋಪ?

'ಎಲೆಕ್ಷನ್' ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

"ಇವರು ಅಧಿಕಾರದಲ್ಲಿದ್ದಾಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಹಾಗೆ ಮಾಡಲಿಲ್ಲ, ಯಾಕೆ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿಕೆಯೇ? ಅತಿ ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ಗೊತ್ತಿದೆ" ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸಿದ್ದರಾಮಯ್ಯನವರ ವಿರುದ್ದ ಆರೋಪ ಮಾಡಿದ್ದರು.

"ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ?" - ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

"ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ" - ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

"ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು" ಎಂದು ಕುಮಾರಸ್ವಾಮಿ ಸಾಲುಸಾಲು ಟ್ವೀಟ್ ಅನ್ನು ಮಾಡಿದ್ದರು.

English summary
Dr. H C Mahadevappa Reaction On H D Kumaraswamy Blame On Siddaramaiah Over Kantharaj report. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X