ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

|
Google Oneindia Kannada News

ಮೈಸೂರು, ನವೆಂಬರ್ 1 : ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚಿಕ್ಕಮಾದು (68) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 1ರ ಮಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಆಸ್ಪತ್ರೆಯಿಂದ ಮೈಸೂರಿನ ವಿಜನಗರದ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿದೆ.

ಜೆಡಿಎಸ್ ಶಾಸಕ ಚಿಕ್ಕಮಾದು ಆರೋಗ್ಯ ಸ್ಥಿತಿ ಗಂಭೀರಜೆಡಿಎಸ್ ಶಾಸಕ ಚಿಕ್ಕಮಾದು ಆರೋಗ್ಯ ಸ್ಥಿತಿ ಗಂಭೀರ

chikkamadu

ಜೆಡಿಎಸ್ ಶಾಸಕರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಜೆಡಿಎಸ್ ನಾಯಕ ಎಚ್.ವಿಶ್ವನಾಥ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಹಲವು ದಿನಗಳಿಂದ ಚಿಕ್ಕಮಾದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಚಿಕ್ಕಮಾದು ಅವರ ಆರೋಗ್ಯ ವಿಚಾರಿಸಿದ್ದರು.

1978ರಲ್ಲಿ ರಾಜಕೀಯಕ್ಕೆ ಚಿಕ್ಕಮಾದು ಅವರು ಪಾದಾರ್ಪಣೆ ಮಾಡಿದ್ದರು. ಮೊದಲು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. 1991ರಲ್ಲಿ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

2007-08ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಿಕ್ಕಮಾದಯ ಅವರು 48,606 ಮತಗಳನ್ನು ಪಡೆದು ಜಯಗಳಿಸಿದ್ದರು.

English summary
Mysuru district HD Kote JDS MLA S.Chikkamadu no more. He died in Mysuru private hospital on November 1 around 2 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X