ಪ್ರಮಾಣ ವಚನಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಎಚ್ ಡಿಕೆ
ಮೈಸೂರು, ಮೇ 23 : ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬುಧವಾರ ಮೈಸೂರಿಗೆ ಆಗಮಿಸುತ್ತಿದ್ದು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ನಾಡ ದೇವಿಗೆ ಪೂಜೆ ಸಲ್ಲಿಸಲ್ಲಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ ಗೆ ಬಂದಿಳಿದು, ನಂತರ ಚಾಮುಂಡೇಶ್ಚರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ಲಲಿತಮಹಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ 10:20ಕ್ಕೆ ರಾಮನಗರ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ನಂತರ ನಗರದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

12 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ತೆರಳಿ 12:30ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications