ಸಿದ್ದರಾಮಯ್ಯನವರ ಪಾತ್ರ ಎರಡು ದಿನಗಳಲ್ಲಿ ತಿಳಿಯಲಿದೆ: ಎಚ್ ಡಿಕೆ
Recommended Video

ಮೈಸೂರು, ಮೇ 23 : ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಇಂದು ಬುಧವಾರ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದ ನಿಯೋಜಿತ ಸಿಎಂ ಕುಮಾರಸ್ವಾಮಿ ಅವರು ದೇವಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.
ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೆಂದು ಇನ್ನೆರಡು ದಿನದಲ್ಲಿ ತಿಳಿಸುತ್ತೇನೆ. ನನ್ನ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್‌ನ ಜನಪ್ರಿಯ ಕಾರ್ಯಕ್ರಮಗಳು ಮುಂದುವರೆಯುತ್ತವೆ.
ನನ್ನ ಗ್ರಾಮವಾಸ್ತವ್ಯ, ಜನತಾದರ್ಶನ ಕಾರ್ಯಕ್ರಮವೂ ಮುಂದುವರೆಯಲಿದೆ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿಗೆ ಧಕ್ಕೆಯಾಗದಂತೆ ಸಾಲಮನ್ನಾದ ಬಗ್ಗೆ ನಿರ್ಧಾರ ಮಾಡ್ತೇನೆ ಎಂದರು. ಬಿಜೆಪಿಯವರಿಗೆ ಕಾಣೋದೇಲ್ಲ ಹಳದಿಯೇ. ಅವರು ಪ್ರತಿಭಟನೆ ಮಾಡೋದಾದ್ರೆ ಮಾಡಿಕೊಳ್ಳಲಿ ನನ್ನದೇನು ಅಭ್ಯಂತರ ಇಲ್ಲ.
ನಾನು ಸದಾ ಜನರ ಮಧ್ಯೆ ಇರುವ ಸಿಎಂ ಆಗಿರುತ್ತೇನೆ ಎಂದು ಆಶ್ವಾಸನೆ ನೀಡಿದರು.
ನಿಪಾ ವೈರಸ್ ಕುರಿತು ಪ್ರತಿಕ್ರಿಯಿಸಿದ ಅವರು, ಕೇರಳದಾದ್ಯಂತ ಮಾರಕ ನಿಪಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಹತ್ತು ಮಂದಿ ಮೃತಪಟ್ಟಿದ್ದಾರೆ. ಕೇರಳಕ್ಕೆ ಹೊಂದಿಕೊಂಡಿರುವ ನಮ್ಮ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಸಾಧ್ಯತೆಗಳಿವೆ.
ಆದ್ದರಿಂದ ವೈರಾಣು ಸೋಂಕು ತಡೆಯಲು ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಈಗಾಗಲೇ ಆದೇಶಿಸಿದ್ದೇನೆ ಎಂದು ತಿಳಿಸಿದರು.












Click it and Unblock the Notifications