ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧ; ಆದರೆ, ಈ ನಾಯಕನಿಂದ ತಕರಾರು- ಎಚ್‌ಡಿಕೆ
ಮೈಸೂರು, ನವೆಂಬರ್ 18: ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಈಗಾಗಲೆ ಸಿದ್ಧವಾಗಿದೆ, ಆದರೆ ಪಕ್ಷ್ಯದ ಜ್ಯೋತಿಷಿ ಮಾಜಿ ಸಚಿವ ಎಚ್.ಡಿ. ರೇವಣ್ಣ ತಕರಾರಿನಿಂದ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾವೇಶದ ಆರಂಭಕ್ಕೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕುಮಾರಸ್ವಾಮಿ ಶಾಸಕರಾದ ಜಿಟಿಡಿ, ಬಂಡಪ್ಪ ಕಾಶಂಪುರ್, ಸಿಎಸ್ ಪುಟ್ಟರಾಜು ಭಾಗಿಯಾಗಿದ್ದರು.ನಾಡಿನ ಅಧಿದೇವತೆಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಚುನಾವಣೆಗೆ ಪಕ್ಷದ 100 ಅಭ್ಯರ್ಥಿಗಳ ಪಟ್ಟಿ ಈಗಾಗಲೆ ಸಿದ್ಧವಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಬಿಡುಗಡೆಗೆ ಸಿದ್ಧತೆಗೆ ನಡೆದಿತ್ತು. ಆದರೆ ಇದಕ್ಕೆ ರೇವಣ್ಣ ತಕರಾರು ತೆಗೆದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ನಂತರ ಎಚ್‌ಡಿ ದೇವೇಗೌಡರ ನೇತೃತ್ವದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಕಳೆದ ಬಾರಿ ಕುಮಾರ ಪರ್ವವನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆರಂಭಿಸಲಾಗಿತ್ತು. ಮುಂಬರುವ ಚುನಾವಣಾ ಪ್ರಚಾರವನ್ನು ಇಲ್ಲಿಂದಲೇ ಆರಂಭಿಸುತ್ತೇವೆ. ಕೋಲಾರದಲ್ಲಿ ಆರಂಭವಾಗಲಿರುವ ಪಂಚರತ್ನ ರಥಯಾತ್ರೆಯ ಸಮರೂಪ ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸುಮಾರು 15 ಲಕ್ಷ ಮಂದಿ ಭಾಗವಹಿಸಲಿದ್ದಾರೆ.
123 ಕ್ಷೇತ್ರ ಗೆಲ್ಲುವ ಗುರಿ
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೇರುವ ಅಭಿಲಾಷೆ ಹೊಂದಿದೆ, ಆ ಕಾರಣದಿಂದಲೇ ಪಂಚರತ್ನ ರಥಯಾತ್ರೆ ಆರಂಭಿಸಿದ್ದು, ಎಲ್ಲಾ 224 ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ 123 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯಿಟ್ಟುಕೊಂಡು ಹೊರಟಿದ್ದೇವೆ. ರಾಜಕಾರಣದಲ್ಲಿ ಮುಂದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನರಾ ಪರಿವಾರದಿಂದ ಹೋದವರೇ ಇದ್ದಾರೆ, ಕೆಲವರು ಮತ್ತೆ ಪಕ್ಷಕ್ಕೆ ಬರಬಹುದು, ಬಂದಾಗ ಏನೂ ತೀರ್ಮಾನ ಮಾಡಿಬೇಕೋ ನೋಡೋಣ ಎಂದರು.
ಜನರಿಗೆ ನೆರಳು ನೀಡಿ, ಕೆಡುವ ಕೆಲಸ ಬೇಡ
ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಮೈಸೂರಿನ ಬಸ್ ನಿಲ್ದಾಣ ಶೈಲಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ನೀಡಿರುವ ಜನರ ಗತಿ ಏನು?. ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ. ಸಂಸದರು ಕಣ್ಣೀರು ಹಾಕಿಸಿರುವುದನ್ನು ಗಮನಿಸಿದ್ದೇನೆ. ಆದರೆ ಮಸೀದಿಯನ್ನಾದರೂ ಮಾಡಲಿ, ಗೋಪುರವನ್ನಾದರೂ ಮಾಡಲಿ. ಆದರೆ ಜನರಿಗೆ ನೆರಳು ಕೊಡಿ, ಕೆಡುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.

ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎನ್ನುವ ಗಾಬರಿ ನನಗೆ ಇಲ್ಲ: ಕುಮಾರಸ್ವಾಮಿ ಮಾತು ಮುಂದುವರಿಸಿದ ಅವರು, 123 ಗುರಿಇಟ್ಟು ನಾವು ಹೊರಟಿದ್ದೇವೆ. ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಇದ್ದಾರೆ. ಕೆಲವರು ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ಹೇಳಿದರು.












Click it and Unblock the Notifications