ಚಾಮರಾಜನಗರ ಆಕ್ಸಿಜನ್ ದುರಂತ: ಮರುತನಿಖೆಗೆ ಸರ್ಕಾರಕ್ಕೆ ಪತ್ರ

ಮೈಸೂರು, ಜೂನ್‌ 27: ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾತೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಚಾರ್ಚ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಚ್ ಫ್ರೇಮ್ ಅನ್ನು ಸಿದ್ಧ ಮಾಡುತ್ತಿದ್ದೇವೆ ಎಂದರು.

re-investigation Chamarajanagar oxygen Disaster

ಕೊರೊನಾ ಸಮಯದಲ್ಲಿ ರಾಜ್ಯದಲ್ಲಿ ಸಂಭವಿಸಿದ ದೊಡ್ಡ ದುರಂತ ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರಕ್ಕೆ ಸಂಬಂಧಿಸಿದಂತೆ ಚಾರ್ಚ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಈ ಬಗ್ಗೆ ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಕಾಲ ಮಿತಿಯೊಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು, ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಚಿಂತನೆಯ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಈ ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷದಿಂದ ಬಂದವರಿಂದ ಬಿಜೆಪಿಯ ಶಿಸ್ತು ಕೆಟ್ಟಿದೆ ಎನ್ನುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದೇನು?

ಕರ್ನಾಟಕ ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ಪಕ್ಷದ ಕೆಲ ಮುಖಂಡರು ತಮ್ಮದೇ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದು, ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಮುಖಂಡರ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ಈ ಹಿಂದೆ ಶಿಸ್ತಿನ ಪಕ್ಷವಾಗಿತ್ತು. ಆದರೆ, ಈಗ ಪಕ್ಷದಲ್ಲಿ ಅಶಿಸ್ತಿನ ವಾತಾವರಣವಿದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ. ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದು ಹೇಳಿದ್ದರು. ಈ ಹೇಳಿಕೆ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+