KRS and Kabini Dam: ಕೆಆರ್‌ಎಸ್, ಕಬಿನಿ ಜಲಾಶಯದಿಂದ ಭಾರಿ ನೀರು ಬಿಡುಗಡೆ: ಪ್ರವಾಹ ಆತಂಕ
ಕೇರಳ, ಕರ್ನಾಟಕದ ಪಶ್ಚಿಮಘಟ್ಟ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದ ಕೆಆರ್‌ಎಸ್ ಹಾಗೂ ಕಬಿನಿ ಜಳಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡಲಾಗಿದ್ದು ನದಿಪಾತ್ರದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ನೀರು ಬರುತ್ತಿರುವುದರಿಂದ ಕೆಆರ್‌ಎಸ್ ಜಲಾಶಯದಿಂದ ಸುಮಾರು 1.10 ಲಕ್ಷ ಕ್ಯುಸೆಕ್ ಹಾಗೂ ಕಬಿನಿ ಡ್ಯಾಂನಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಮೈಸೂರು ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಜಲಾಶಯದ ಒಳಹರಿವು 60 ಸಾವಿರ ಕ್ಯುಸೆಕ್ ಇದ್ದು ಜಲಾಶಯದ ಮಟ್ಟ 2283.50 ಅಡಿಗೆ ಇಳಿದಿದೆ.
ಕೆಆರ್‌ಎಸ್ ಡ್ಯಾಂನಿಂದ ಹೊರಹರಿವು 2 ಲಕ್ಷ ಕ್ಯುಸೆಕ್‌ಗಿಂತ ಅಧಿಕವಾಗುವ ಸಾಧ್ಯತೆ ಇದ್ದು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಬೇಕು. ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ತೆರಳುವಂತೆ ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದ ಮುಂದಿನ ಸೇತುವೆ ಮುಳುಗಡೆ ಆಗಿರುವುದರಿಂದ, ಬಿದರಹಳ್ಳಿ, ಎನ್. ಬೇಗೂರು ಮತ್ತು ಬೀರಂಬಳ್ಳಿ ಮುಂತಾದ 45 ಕ್ಕೂ ಹೆಚ್ಚು ಗ್ರಾಮಗಳಿಗೆ ಸರಗೂರು, ಸಾಗರೆ, ಆಗತ್ತೂರು ಗ್ರಾಮಗಳ ಮೂಲಕ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರೂ, 80 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ಆಗತ್ತೂರು ಮತ್ತು ಸಾಗರೆ ಬಳಿ ರಸ್ತೆಯಲ್ಲಿ ನೀರು ಹರಿಯುತ್ತಿದೆ.
ಜಲಾಶಯ ವ್ಯಾಪ್ತಿಯ ಕೇರಳದ ವಯನಾಡು ಜಿಲ್ಲೆಯ ಮಾನಂದವಾಡಿ ತಾಲೂಕು ಮತ್ತು ಸುಲ್ತಾನ್ ಬತೇರಿ ತಾಲೂಕುಗಳಲ್ಲಿ ಮಳೆ ನಿರಂತರವಾಗಿದ್ದು ಜಲಾಶಯಕ್ಕೆ ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಇದೆ. ತಾರಕಾ ಜಲಾಶಯ ಭರ್ತಿಯಾಗಿ ನೀರು ಹರಿಯುತ್ತಿರುವುದರಿಂದ ಎಚ್.ಡಿ.ಕೋಟೆ ಪಟ್ಟಣದ ಬಳಿಯ ಹೆಗ್ಗಡಾಪುರ ಕೆರೆ ಭರ್ತಿಯಾಗಿದ್ದು, ರಸ್ತೆ ಮೇಲೆ ನೀರು ಹರಿಯುತ್ತಿದೆ. ನಾಗನಹಳ್ಳಿ ಮುಂತಾದ ಗ್ರಾಮಗಳಿಗೆ ಹೆಗ್ಗಡಾಪುರ ಗ್ರಾಮದ ಮೂಲಕ ಬದಲಿ ರಸ್ತೆ ಕಲ್ಪಿಸಲಾಗಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications