ಮೈಸೂರು ದಸರಾ: ಪಾರಂಪರಿಕ ನಡಿಗೆಗೆ ಚಾಲನೆ
ಮೈಸೂರು, ಸೆಪ್ಟೆಂಬರ್ 23: ಪಾರಂಪರಿಕ ರಾಜಧಾನಿ ಎಂದೇ ಹೆಸರುವಾಸಿಯಾಗಿರುವ ಮೈಸೂರಿನಲ್ಲಿ 200 ಕ್ಕೂ ಹೆಚ್ಚಿನ ಪಾರಂಪರಿಕ ಕಟ್ಟಡಗಳಿವೆ. ಈ ಹಿನ್ನೆಲೆ ಮೈಸೂರಿನ ಕಟ್ಟಡಗಳ ಪರಿಚಯಕ್ಕಾಗಿ ಇಂದು ಪಾರಂಪರಿಕ ನಡಿಗೆ ಏರ್ಪಡಿಸಲಾಗಿತ್ತು.
ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ದಸರಾ ಮಹೋತ್ಸವದ ಅಂಗವಾಗಿ ಪ್ರಮುಖವಾದ 10 ಪಾರಂಪರಿಕ ಸ್ಥಳಗಳನ್ನು ಮೊದಲ ಮಾರ್ಗದಲ್ಲಿ ಸಂದರ್ಶಿಸಲಾಯಿತು.

ನಡಿಗೆಯು ಪುರಭವನ, ಸಿಲ್ವರ್ ಜುಬಿಲಿ ಕ್ಲಾರ್ಕ್ ಟವರ್, ಫ್ರಿ ಮೇಸನ್ಸ್ ಕ್ಲಬ್, ಚಾಮರಾಜೇಂದ್ರ ವೃತ್ತ, ಅಂಬಾವಿಲಾಸ ಅರಮನೆ, ಕೃಷ್ಣರಾಜೇಂದ್ರ ವೃತ್ತ, ದೇವರಾಜ ಮಾರುಕಟ್ಟೆ ಕೃಷ್ಣ ರಾಜೇಂದ್ರ ಆಸ್ಪತ್ರೆ, ಮೈಸೂರು ಮೆಡಿಕಲ್ ಕಾಲೇಜು ಮತ್ತು ಆಯುರ್ವೆದಿಕ್ ಆಸ್ಪತ್ರೆಯಿಂದ ಸಾಗಿ ಬಂತು. ಸಂಕ್ಷಿಪ್ತ ಇತಿಹಾಸದ ಮೆಲುಕು ಹಾಕಿ ಪ್ರತಿಸ್ಥಳದ ಮಾಹಿತಿಯನ್ನು ತಜ್ಞರು ಎಳೆ ಎಳೆಯಾಗಿ ಬಿಚ್ಚಿಟ್ಟರು.
ದಸರಾ ವೈಭವ 2017: ಸರಳ ದಸರಾದ ಅಪರೂಪದ ಚಿತ್ರಗಳು

ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಅವರು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು, ನಂತರ ಮಾತನಾಡಿದ ಅವರು ಕೇವಲ ಪಾರಂಪರಿಕ ಸ್ಥಳ ವೀಕ್ಷಣೆ ಅಷ್ಟೆ ಅಲ್ಲದೆ ಮಾಹಿತಿ ತಿಳಿದುಕೊಳ್ಳುವ ವಿಶೇಷ ಕಾರ್ಯಕ್ರಮ ಇದಾಗಿದ್ದು,ಎಲ್ಲರೂ ಭಾಗವಹಿಸಿ ನಗರದ ಪರಂಪರೆಯನ್ನು ವಾಸ್ತು ಶಿಲ್ಪವನ್ನು ಅರಿತುಕೊಂಡು ನಡೆಯಬೇಕು ಎಂದು ತಿಳಿಸಿದರು.

ಇದೇ ಬಗ್ಗೆ ಇತಿಹಾಸ ತಜ್ಞರಾದ ಎನ್.ಎಸ್. ರಂಗರಾಜು ಹಾಗೂ ಈಚನೂರು ಕುಮಾರ್ ಅವರು ಪಾರಂಪರಿಕ ಕಟ್ಟಡಗಳ ಬಗ್ಗೆ ವಿವರಿಸಿದರು. ಪಾರಂಪರಿಕ ಕಾರ್ಯಕ್ರಮ ಭಾನುವಾರ ನಡೆಯಲಿದ್ದು 50 ಜಾವಾ ಬೈಕ್ ಗಳಲ್ಲಿ ಹಾಗೂ ಸೋಮವಾರ ಟ್ರಿಣ್ ಟ್ರಿಣ್ ಸೈಕಲ್ ಬಳಸಿಕೊಂಡು ಪಾರಂಪರಿಕ ಸ್ಥಳಗಳನ್ನು ಸಂದರ್ಶಿಸಲಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications