ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದುಗೆ ಹೈಕೋರ್ಟ್ ಜಾಮೀನು

ಮೈಸೂರು, ಫೆಬ್ರವರಿ 05: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ ವರ್ಷದ ಡಿಸೆಂಬರ್ 5 ರಂದು ನಡೆದ ಉಪ ಚುನಾವಣೆಯ ಮತದಾನದ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ್ದರು ಎಂಬ ಕಾರಣಕ್ಕೆ ಪೊಲೀಸರು ದೂರು ದಾಖಲಿಸಿದ್ದರು.

High Court Bail To HD Kote MLA Anil Chikkamadu

ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಅವರನ್ನು 1 ನೇ ಆರೋಪಿಯಾಗಿ ಮತ್ತು ಎಚ್.ಡಿ.ಕೋಟೆ ಕಾಮಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರನ್ನು 2 ನೇ ಆರೋಪಿಯನ್ನಾಗಿಸಿ ಎಫ್‌ಐಆರ್ ದಾಖಲಿಸಿದ್ದರು.

High Court Bail To HD Kote MLA Anil Chikkamadu

ಈ ಸಂಬಂಧ ಈ ಇಬ್ಬರು ನಾಯಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ಅನಿಲ್ ಚಿಕ್ಕಮಾದು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಅವರಿಗೆ ಜಾಮೀನು ನೀಡಿದೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಚಂದ್ರಮೌಳಿ ಅವರು ವಾದಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+