ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೇಸ್‌ ಕ್ಲಬ್‌ಗೆ ಭೂಮಿ ಗುತ್ತಿಗೆ; ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 27: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ.

ಇಲ್ಲಿನ ಕುರುಬರ ಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್ ಗೆ ಗುತ್ತಿಗೆ ನೀಡಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಿಂದ ಸರ್ಕಾರಕ್ಕೆ ನೋಟೀಸ್ ಜಾರಿಯಾಗಿದೆ. ವಕೀಲ ಉಮಾಪತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ.

ಜಾಗದ ತಕರಾರು: ಉಡುಪಿಯಲ್ಲಿ ನ್ಯಾಯಕ್ಕಾಗಿ ವಿಧವೆಯ ಅಳಲುಜಾಗದ ತಕರಾರು: ಉಡುಪಿಯಲ್ಲಿ ನ್ಯಾಯಕ್ಕಾಗಿ ವಿಧವೆಯ ಅಳಲು

ಯಾವ ಆಧಾರದಲ್ಲಿ ಭೂಮಿಯನ್ನು 30 ವರ್ಷ ಗುತ್ತಿಗೆ ನೀಡಲಾಗಿದೆ ಎಂದು ಪ್ರಶ್ನಿಸಿರುವ ಕೋರ್ಟ್, ಗುತ್ತಿಗೆಗೆ ಪ್ರತಿಫಲವಾಗಿ ಕ್ಲಬ್ ವಾರ್ಷಿಕವಾಗಿ ಗಳಿಸುವ ಆದಾಯದ ಶೇ. 2ರಷ್ಟನ್ನು ಬಾಡಿಗೆಯಾಗಿ ನಿಗದಿಪಡಿಸಲಾಗಿದೆ. ಅದರಂತೆ ಕ್ಲಬ್ ಒಂದು ವೇಳೆ ಆದಾಯ ಗಳಿಸದಿದ್ದರೆ ಬಾಡಿಗೆ ನೀಡುವಂತಿಲ್ಲವೇ ಎಂದು ಪ್ರಶ್ನಿಸಿದೆ. ಎಲ್ಲಾ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

Mysuru: High Court Notice To Government Regarding Giving Land For Lease To Race Club

ಜಮೀನಿನ ಉಪ ಗುತ್ತಿಗೆ ಪಡೆದಿರುವ ಜಯ ಚಾಮರಾಜೇಂದ್ರ ಗಾಲ್ಫ್ ಕ್ಲಬ್ ಅನ್ನು ಪ್ರತಿವಾದಿಯಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

English summary
The High Court has issued notice to the government on the issue of lease land to Mysure Race Club,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X