ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲಾ ಧರ್ಮದವರಿಗೂ ಸಮಾನ ಸವಲತ್ತಿರಲಿ: ಪೇಜಾವರ ಶ್ರೀ

|
Google Oneindia Kannada News

ಮೈಸೂರು, ಜೂನ್ 1: ದೇಶದಲ್ಲಿ ಮುಸ್ಲಿಮರಿಗೆ ಹೋಲಿಸಿದರೆ, ಹಿಂದೂಗಳಿಗೆ ದೊರೆಯುವ ಸವಲತ್ತುಗಳು ಕಡಿಮೆ ಎಂದು ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ಕಡಿಮೆ ಸವಲತ್ತುಗಳಿವೆ. ಎಲ್ಲಾ ಧರ್ಮದವರಿಗೂ ಸಮಾನ ಸವಲತ್ತುಗಳು ಇರಬೇಕು. ಸರ್ವ ಧರ್ಮ ಸಮಾನತೆ ದೇಶಾದ್ಯಾಂತ ಜಾರಿಗೆ ಬರಬೇಕು. ಆದರೆ ಮುಸ್ಲಿಮರಿಗೆ ಸವಲತ್ತುಗಳು ಹೆಚ್ಚಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿಯಮಗಳನ್ನು ಜಾರಿಗೆ ತರಬೇಕು ಎಂದರು. ರಾಮಮಂದಿರ ನಿರ್ಮಾಣ ಕೇಂದ್ರ ಸರ್ಕಾರದ ಆಧ್ಯತೆ ಆಗಬೇಕು ಎಂದು ಒತ್ತಾಯಿಸಿದರು.

ಹಿಂದುತ್ವ ಜಾಗೃತವಾಗಿದ್ದೇ ಬಿಜೆಪಿ ಗೆಲುವಿಗೆ ಕಾರಣ - ಪೇಜಾವರ ಶ್ರೀಹಿಂದುತ್ವ ಜಾಗೃತವಾಗಿದ್ದೇ ಬಿಜೆಪಿ ಗೆಲುವಿಗೆ ಕಾರಣ - ಪೇಜಾವರ ಶ್ರೀ

ಬಿಜೆಪಿ ಮತ್ತೆ ಅಧಿಕಾರಕ್ಕೆ‌ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಪೇಜಾವರ ಶ್ರೀಗಳು, ಅಂಬೇಡ್ಕರ್ ಕೊಟ್ಟ ಸಂವಿಧಾನ ಬಹಳ ಶ್ರೇಷ್ಟವಾದದ್ದು. ಇದನ್ನ ಬದಲಾವಣೆ ಮಾಡುತ್ತೇನೆ ಎನ್ನುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಕೊಡುವ ಬಿಜೆಪಿ ನಾಯಕರನ್ನು ನಾನು ಖಂಡಿಸುತ್ತೇನೆ ಎಂದು ಕಿಡಿಕಾರಿದರು.

Hindus do not have the privilege as much as Muslims said Pejavara Shri

ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ನಾನು ಮಾತನಾಡಲ್ಲ. ನಾನು ಮೊದಲೇ ಹೇಳಿದ್ದೆ, ಮೂರು ಪಕ್ಷದವರು ಸೇರಿ ಸರ್ಕಾರ ರಚನೆ ಮಾಡಬೇಕು ಅಂತ. ಆದರೆ ರಾಜ್ಯದಲ್ಲಿ ಎರಡು ಪಕ್ಷ ಸೇರಿ ಸರ್ಕಾರ ರಚನೆ ಮಾಡಿತ್ತು. ಮೂರು ಪಕ್ಷದವರು ಸೇರಿ ಸರ್ಕಾರ ರಚನೆ ಮಾಡಬೇಕಿತ್ತು. ಇದರಿಂದ ರಾಜ್ಯ ಹಾಗೂ ದೇಶ ಅಭಿವೃದ್ಧಿ ಹೊಂದುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಮೋದಿ ಅಯೋಧ್ಯೆಯತ್ತ ಗಮನಹರಿಸಲಿ: ಪೇಜಾವರಶ್ರೀಮೋದಿ ಅಯೋಧ್ಯೆಯತ್ತ ಗಮನಹರಿಸಲಿ: ಪೇಜಾವರಶ್ರೀ

ಮಾಜಿ ಪ್ರಧಾನಿ ದೇವೇಗೌಡ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋತಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀಗಳು, ಅವರಂತಹ ಹಿರಿಯ ನಾಯಕರು ಗೆಲ್ಲಬೇಕಿತ್ತು. ಬಿಜೆಪಿಯವರನ್ನು ಸೋಲಿಸಬೇಕೆಂಬ ಏಕೈಕ ಉದ್ದೇಶದಿಂದ ಜೆಡಿಎಸ್ - ಕಾಂಗ್ರೆಸ್ ಒಂದಾಗಿದ್ದು ಸೋಲಿಗೆ ಕಾರಣವಾಯಿತು. ಗೋಡ್ಸೆ ಪರ ವಕಾಲತ್ತು ವಹಿಸಿದ್ದ ವ್ಯಕ್ತಿ ಚುನಾವಣೆಯಲ್ಲಿ ಗೆದ್ದಿದ್ದು ನನಗೆ ಅಸಮಾಧಾನ ತಂದಿದೆ, ಅಂತಹವರು ಗೆಲ್ಲಬಾರದಿತ್ತು ಎಂದರು.

English summary
Vishweshatheertha shree said that, Hindus are less privileged as compared to Muslims in the country. every religion should have the same facilities he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X