ಈಗ ವಿಶ್ವನಾಥ್ ಗೆ ಸಿಕ್ಕಿದೆ ಒಕ್ಕಲಿಗರ ಬಲ

ಮೈಸೂರು, ನವೆಂಬರ್ 28: ಹುಣಸೂರು ಉಪ ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ ಹುಣಸೂರಿನಲ್ಲಿ ಬಿಜೆಪಿಯಿಂದ ಒಕ್ಕಲಿಗರ ಮತ ಬೇಟೆ ಮುಂದುವರೆದಿದ್ದು ಕಾಂಗ್ರೆಸ್ ಮುಖಂಡರೊಬ್ಬರನ್ನು ಬಿಜೆಪಿಗೆ ಕರೆತರಲು ಸಿ.ಪಿ.ಯೋಗೇಶ್ವರ್ ನಡೆಸಿದ ಸಂಧಾನ ಯಶಸ್ವಿಯಾಗಿದೆ.

ಹುಣಸೂರಿನ ತಾಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರು ಮತ್ತು ಮೈಸೂರು ಹಾಲು ಒಕ್ಕೂಟದ ಮಾಜಿ‌ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಮುಖಂಡರಾದ ರಾಮಕೃಷ್ಣಗೌಡ ಅವರು ತಮ್ಮ ನೂರಾರು ಬೆಂಬಲಿಗರೂಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ತೇಗದ ನಾಡಿನಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಸಿ.ಪಿ.ಯೋಗೇಶ್ವರ್ ತಂತ್ರದಿಂದ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಗೆ ಒಕ್ಕಲಿಗರ ಬಲ ದಿನೇ ದಿನೇ ಹೆಚ್ಚುತ್ತಿದೆ. ಈ ಮಧ್ಯೆ ಹುಣಸೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಒಕ್ಕಲಿಗ ಮತ ಗಳಿಸಿದರೆ ಬಿಜೆಪಿ ಗೆಲುವು ಸುಲಭವಾಗಲಿದೆ ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.

Hunasuru Congress Candidate Ramakrishnagowda Joined BJP Today

ಹೀಗಾಗಿ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನ ಮುಖಂಡರಾದ ರಾಮಕೃಷ್ಣಗೌಡರ ಜತೆ ಮಾತುಕತೆ ನಡೆಸಿ ಬಿಜೆಪಿಗೆ ಸೆಳೆದಿದ್ದಾರೆ. ರಾಮಕೃಷ್ಣಗೌಡರು ತಮ್ಮ ಬೆಂಬಲಿಗರೊಂದಿಗೆ ಕಮಲ ಮುಡಿಯಲು ಮುಂದಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+