ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಣಸೂರು ಉಪ ಚುನಾವಣೆ; ಬಿಜೆಪಿಯ ಅಚ್ಚರಿಯ ನಡೆ!

|
Google Oneindia Kannada News

ಮೈಸೂರು, ನವೆಂಬರ್ 08 : ಹುಣಸೂರು ಉಪ ಚುನಾವಣೆ ಗೆಲ್ಲಲು ಬಿಜೆಪಿ ಅಚ್ಚರಿಯ ಹೆಜ್ಜೆ ಇಟ್ಟಿದೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಮಾತ್ರ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಎಚ್. ವಿಶ್ವನಾಥ್ ಅನರ್ಹಗೊಂಡಿರುವುದರಿಂದ ಉಪ ಚುನಾವಣೆ ಎದುರಾಗಿದೆ. ಅನರ್ಹತೆ ಪ್ರಶ್ನಿಸಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಪೂರ್ಣಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ. ನವೆಂಬರ್ 11ರಂದು ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ.

ಹುಣಸೂರು ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮ?ಹುಣಸೂರು ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಅಂತಿಮ?

ಹುಣಸೂರು ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಚರ್ಚೆ ಜೋರಾಗಿದೆ. ಎಚ್. ವಿಶ್ವನಾಥ್, ಎಚ್. ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ. ಪಿ. ಯೋಗೇಶ್ವರ ಹೆಸರು ಮುಂಚೂಣಿಯಲ್ಲಿತ್ತು.

ಹುಣಸೂರು ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಪ್ರಜ್ವಲ್ ದಿಟ್ಟ ನಿರ್ಧಾರಹುಣಸೂರು ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಪ್ರಜ್ವಲ್ ದಿಟ್ಟ ನಿರ್ಧಾರ

ಬಿಜೆಪಿ ತನ್ನ ಕಾರ್ಯತಂತ್ರವನ್ನು ಬದಲಾವಣೆ ಮಾಡಿದೆ. ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಲು ಮುಂದಾಗಿದೆ. ಜೆಡಿಎಸ್ ಸಹ ಸ್ಥಳೀಯರನ್ನು ಅಭ್ಯರ್ಥಿ ಮಾಡುವುದಾಗಿ ಘೋಷಣೆ ಮಾಡಿದೆ. ಇದರಿಂದಾಗಿ ಚುನಾವಣಾ ಲೆಕ್ಕಾಚಾರ ಬದಲಾಗಿದೆ.

ಹುಣಸೂರು ಉಪ ಚುನಾವಣೆ, ದೇವೇಗೌಡರು ಮಾಡಿದ ಶಪಥವೇನು?ಹುಣಸೂರು ಉಪ ಚುನಾವಣೆ, ದೇವೇಗೌಡರು ಮಾಡಿದ ಶಪಥವೇನು?

ಬಿಜೆಪಿ ತಂತ್ರ ಬದಲು

ಬಿಜೆಪಿ ತಂತ್ರ ಬದಲು

ಹುಣಸೂರು ಉಪ ಚುನಾವಣೆ ತಂತ್ರವನ್ನು ಬಿಜೆಪಿ ಬದಲಾವಣೆ ಮಾಡಿದೆ. ತಾಲೂಕು ಬಿಜೆಪಿ ಅಧ್ಯಕ್ಷರಾದ ಬಿ. ಎಸ್. ಯೋಗಾನಂದ ಕುಮಾರ್ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಈ ಮೂಲಕ ಸ್ಥಳೀಯ ಅಭ್ಯರ್ಥಿ ಮೂಲಕ ಕ್ಷೇತ್ರವನ್ನು ವಶಕ್ಕೆ ಪಡೆಯಲು ಮುಂದಾಗಿದೆ.

ಎಚ್. ವಿಶ್ವನಾಥ್‌ಗೆ ಟಿಕೆಟ್ ಇಲ್ಲ

ಎಚ್. ವಿಶ್ವನಾಥ್‌ಗೆ ಟಿಕೆಟ್ ಇಲ್ಲ

ಅನರ್ಹ ಶಾಸಕ ಎಚ್. ವಿಶ್ವನಾಥ್‌ಗೆ ಟಿಕೆಟ್ ನೀಡದಿರಲು ಪಕ್ಷ ತೀರ್ಮಾನಿಸಿದೆ. ಅವರ ಬದಲು ಎಚ್. ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ. ಪಿ. ಯೋಗೇಶ್ವರಗೆ ಟಿಕೆಟ್ ನೀಡಬಹುದು ಎಂಬ ಸುದ್ದಿ ಹಬ್ಬಿತ್ತು. ಈಗ ಯೋಗಾನಂದ ಹೆಸರು ಮುಂಚೂಣಿಗೆ ಬಂದಿದೆ.

ಚುನಾವಣೆ ಸಿದ್ಧತೆ ಆರಂಭ

ಚುನಾವಣೆ ಸಿದ್ಧತೆ ಆರಂಭ

ಬಿ. ಎಸ್. ಯೋಗಾನಂದ ಕುಮಾರ್ ಉಪ ಚುನಾವಣೆ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳೀಯ ನಾಯಕರ ಜೊತೆ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಬಿ. ಎಸ್. ಯೋಗಾನಂದ ಕುಮಾರ್ ಎಂಬ ಫೇಸ್ ಬುಕ್ ಪೇಜ್ ತೆರೆದು ಚುನಾವಣಾ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಂತಿಮ

ಕಾಂಗ್ರೆಸ್ ಅಭ್ಯರ್ಥಿ ಅಂತಿಮ

ಹುಣಸೂರು ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಂಡಿದ್ದಾರೆ. ಮಾಜಿ ಶಾಸಕ ಎಚ್. ಪಿ. ಮಂಜುನಾಥ್ ಅಭ್ಯರ್ಥಿ. ಕಳೆದ ಚುನಾವಣೆಯಲ್ಲಿ 83,092 ಮತಗಳನ್ನು ಪಡೆದು ವಿಶ್ವನಾಥ್ ವಿರುದ್ಧ ಸೋಲು ಕಂಡಿದ್ದರು. ಜೆಡಿಎಸ್ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ, ಟಿಕೆಟ್‌ಗಾಗಿ 16 ಜನ ಆಕಾಂಕ್ಷಿಗಳಾಗಿದ್ದಾರೆ.

English summary
BJP high command may issue Hunsur assembly seat by election ticket for local candidate. Hunsur taluk BJP president B.S. Yogananda Kumar may candidate for by election which will be held on December 5, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X