ನಂಜನಗೂಡಿನಲ್ಲಿ ಹೆಂಡತಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ
ಮೈಸೂರು, ಫೆಬ್ರವರಿ 19: ಹೆಂಡತಿಯನ್ನು ಕೊಲೆ ಮಾಡಿ ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಾಂತಮೂರ್ತಿ (40) ಎಂಬಾತ ತನ್ನ ಹೆಂಡತಿ ಪುಟ್ಟಮಣಿ (38)ಯನ್ನು ಕೊಲೆ ಮಾಡಿದ್ದಾರೆ. ಹದಿನೈದು ವರ್ಷಗಳ ಹಿಂದೆ ಮಡಹಳ್ಳಿಯ ಶಾಂತಮೂರ್ತಿಗೆ ತಿ.ನರಸೀಪುರ ತಾಲೂಕಿನ ಕಿರಗೂರು ನಿವಾಸಿ ಪುಟ್ಟಮಣಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಪಲ್ಲವಿ (7), ಅಭಿ (12) ಎಂಬ ಇಬ್ಬರು ಮಕ್ಕಳಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಡತಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿ ನಂತರ ತಾನೂ ನೇಣು ಹಾಕಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ಪ್ರಭಾಕರ್ ರಾವ್ ಶಿಂಧೆ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications