ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನನ್ನ ಭವಿಷ್ಯದ ದೃಷ್ಟಿಯಿಂದ ಕ್ಷೇತ್ರವನ್ನು ಹುಡುಕುತ್ತಿದ್ದೇನೆ: ಬಿ.ವೈ. ವಿಜಯೇಂದ್ರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 2: "ನನ್ನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಕ್ಷೇತ್ರವನ್ನು ಬೇಗ ಫೈನಲ್ ಮಾಡಿಕೊಳ್ಳಬೇಕು. ಯಾವ ಕ್ಷೇತ್ರ ಎಂಬುದರ ಬಗ್ಗೆ ಚಿಂತನೆ ಮಾಡುತ್ತಿದ್ದೇನೆ. ಐದಾರು ತಿಂಗಳಲ್ಲಿ ಈ ವಿಚಾರದಲ್ಲಿ ಸ್ಪಷ್ಟ ತೀರ್ಮಾನಕ್ಕೆ ಬರುತ್ತೇನೆ," ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ತಾವು ಕಣಕ್ಕಿಳಿಯುವ ಕುರಿತು ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, "ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ಮತ್ತು ಯಡಿಯೂರಪ್ಪನವರು ತೀರ್ಮಾನ ಮಾಡುತ್ತಾರೆ. ನಂತರ ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕೆಂದು ತೀರ್ಮಾನ ಮಾಡುತ್ತೇನೆ. ಸದ್ಯಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ನಾನು ರಾಜ್ಯಾದ್ಯಂತ ಸುತ್ತುತ್ತಿದ್ದೇನೆ," ಎಂದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, "ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ಕುರಿತು ಸ್ಪಷ್ಟನೆ ನೀಡಿದರು. ಎಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡಿ. ಅಭ್ಯರ್ಥಿ ಕಣದಲ್ಲಿರುವ ಕ್ಷೇತ್ರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ," ಎಂದು ಹೇಳಿದ್ದಾರೆ.

Mysuru: I am Looking For The Constituency In Terms Of My Political Future Says BY Vijayendra

"ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ನಡುವಿನ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿ ಕಣದಲ್ಲಿರುವ ಕ್ಷೇತ್ರದಲ್ಲಿ ಜೆಡಿಎಸ್ ಜತೆ ಯಾವುದೇ ಹೊಂದಾಣಿಕೆ ಇಲ್ಲ. ಮೈಸೂರು, ಚಾಮರಾಜನಗರ ಮಂಡ್ಯ ಇಲ್ಲಿ ಹೊಂದಾಣಿಕೆ ಇಲ್ಲ," ಎಂದು ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದರು.

ಇದೇ ವೇಳೆ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಪರವಾದ ವಾತಾವರಣ ಇದೆ. ಮೈಸೂರಿನಲ್ಲಿಯೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ. ಮಂಡ್ಯದಲ್ಲಿ ಯಾರು ನಮ್ಮ ಅಭ್ಯರ್ಥಿಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಅಲ್ಲಿ ತ್ರಿಕೋನ ಸ್ಪರ್ಧೆ ಇದೆ. ಡಿಸೆಂಬರ್ 5ಕ್ಕೆ ಬಿ.ಎಸ್. ಯಡಿಯೂರಪ್ಪ ಪ್ರಚಾರಕ್ಕೆ ಬರಲಿದ್ದು, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು.

Mysuru: I am Looking For The Constituency In Terms Of My Political Future Says BY Vijayendra

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಅಮಿತ್ ಶಾ ಅವರೇ ಸ್ಪಷ್ಟವಾಗಿ ಈ ಬಗ್ಗೆ ಹೇಳಿದ್ದಾರೆ. ಮುಂದಿನ ಚುನಾವಣೆಯೂ ಸಿಎಂ ಬೊಮ್ಮಾಯಿಯವರ ನಾಯಕತ್ವದಲ್ಲೇ ನಡೆಯಲಿದೆ. ಈ ಬಗ್ಗೆ ಅಮಿತ್ ಶಾ ಹೇಳಿದ ಮೇಲೆ ಚರ್ಚೆ ಅಗತ್ಯ ಇಲ್ಲ ಎಂದರು.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, ಒಬ್ಬ ಜನಪ್ರತಿನಿಧಿ ಬಗ್ಗೆ ಈ ರೀತಿ ಕೊಲೆ ಹಂತಕ್ಕೆ ಇಳಿದಿದ್ದು ಭಯ ತರಿಸಿದೆ. ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಅಕ್ಕಪಕ್ಕದ ರಾಜ್ಯದಲ್ಲಿ ಈ ರೀತಿ ವಾತಾವರಣ ಇತ್ತು. ಎಸ್.ಆರ್. ವಿಶ್ವನಾಥ್ ಒಬ್ಬ ಪ್ರಭಾವಿ ರಾಜಕಾರಣಿಯಾಗಿದ್ದು, ಸಾಕಷ್ಟು ಬಾರಿ ಗೆಲವು ಸಾಧಿಸಿದ್ದಾರೆ. ಇದು ಭಯ ಸೃಷ್ಟಿ ಮಾಡುವಂತಹ ಘಟನೆ. ಬಿಜೆಪಿ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಹಾಗೆಯೇ ಈ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, ಆ ಕ್ಷೇತ್ರದಲ್ಲಿ ಯಾರ ಜೊತೆ ರೌಡಿಗಳು ಇದ್ದಾರೆ ಅನ್ನೋದು ಆ ಕ್ಷೇತ್ರದ ಜನರಿಗೆ ಗೊತ್ತಿದೆ. ಘಟನೆ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ಇದೆ. ಡಿ.ಕೆ. ಶಿವಕುಮಾರ್ ಅವರದ್ದು ಉಡಾಫೆ ಹೇಳಿಕೆ. ಇಂತಹದನ್ನು ಯಾರೂ ಸಮರ್ಥನೆ ಮಾಡಬಾರದು. ಈ ರೀತಿ ಸಂಸ್ಕೃತಿ ಇದು ಇಲ್ಲಿಗೆ ಕೊನೆಯಾಗಬೇಕು, ಈ ರೀತಿಯ ಸಂಸ್ಕೃತಿ ಮುಂದುವರಿಯಬಾರದು. ಬಿಗಿಯಾದ ಕ್ರಮ ತೆಗೆದುಕೊಳ್ಳುವುದಕ್ಕೆ ಮುಖ್ಯಮಂತ್ರಿ ಸಹ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

Recommended Video

ಸರಳತೆ ಮೆರೆದ ಡಿಕೆ ಶಿವಕುಮಾರ್ | Oneindia Kannada

English summary
In terms of my political future, the constituency should be finalized soon, State BJP vice-president BY Vijayendra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X