ನಾನು ಯಾವ ಬೆದರಿಕೆಗೂ ಬಗ್ಗೋನಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಮೈಸೂರು, ಆಗಸ್ಟ್‌, 09: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ಪಾದಾಯಾತ್ರೆ ಕೈಗೊಂಡಿವೆ. ಇನ್ನು ಈ ಬಗ್ಗೆ ಇಂದು (ಆಗಸ್ಟ್‌ 09) ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಿಜೆಪಿ-ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗವುದಿಲ್ಲ, ಬಗ್ಗುವುಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ, ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ-ಜೆಡಿಎಸ್‌ಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಆದರೆ, ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೆಯೋ ಅಲ್ಲಿವರೆಗೂ ನನ್ನನ್ನು ಯಾವ ಪಾದಯಾತ್ರೆಗಳಿಂದಲೂ ಕುಗ್ಗಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ಹೊರಹಾಕಿದರು.

I am not afraid to any threat Why did CM Siddaramaiah say this

ಇನ್ನೂ ಇದೇ ವೇಳೆ ಮಾತು ಮುಂದುವರೆಸಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳು, ಆರೋಪಗಳ ಬಗ್ಗೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ, ಯಾರೂ ಕೂಡ ನನ್ನನ್ನು ಯಾವ ಪಾದಯಾತ್ರೆಗಳಿಂದಲೂ ಅಗಲಾಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ-ಜೆಡಿಎಸ್‌ಗೆ ಎಚ್ಚರಿಕೆ ನೀಡಿದ್ದಾರೆ.

"ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದು, ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಿನಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ," ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಸುಳ್ಳು ಆರೋಪ. ಹಿಂದಿದ್ದ ಮನೆಯನ್ನು ಸಾಲ ತೆಗೆದುಕೊಂಡು ಕಟ್ಟಿಸಿದ್ದೇನೆ. ಬಳಿಕ ಸಾಲ ತೀರಿಸಲಾಗದೆ ಆ ಮನೆಯನ್ನು ಮಾರಾಟ ಮಾಡಿದ್ದೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ ಎಂದು ಹೇಳಿದರು.

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಸಹ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ, ಇದೀಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.

ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ, ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ರೂಪಾಯಿ ಹಣ ಖಾಸಗಿ ಬ್ಯಾಂಕಕ್‌ನಲ್ಲಿದ್ದು ಫ್ರೀಜ್ ಮಾಡಿದ್ದಾರೆ.

ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿಯವರು ತನಿಖೆ ನಡೆಸಿದ್ದಾರೆ. ಆದರೂ ಇಡಿಯವರು ಸ್ವಯಂಸ್ಫೂರ್ತಿಯಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರೂ, ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಆದ್ದರಿಂದ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+