ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ಜಿಟಿಡಿ ಪಕ್ಷಕ್ಕೆ ಬಂದರೆ ಕ್ಷೇತ್ರ ಬಿಟ್ಟುಕೊಡುವೆ ಎಂದ ಶಾಸಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 15; ಮೈಸೂರು ರಾಜಕೀಯದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು, ಈಗ ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಿ ಹೊಸ ಲೆಕ್ಕಾಚಾರ ಹುಟ್ಟು ಹಾಕಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಶಾಸಕ ಜಿ. ಟಿ. ದೇವೇಗೌಡರನ್ನು ಭೇಟಿದ್ದರು. ಇದೀಗ ಚಾಮರಾಜ ಕ್ಷೇತ್ರ ಶಾಸಕ ಬಿಜೆಪಿ ಶಾಸಕ ಎಲ್. ನಾಗೇಂದ್ರ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಜಿಟಿ ದೇವೇಗೌಡ ಅವರ ಮುಂದಿನ ರಾಜಕೀಯ ನಡೆ ಏನುಜಿಟಿ ದೇವೇಗೌಡ ಅವರ ಮುಂದಿನ ರಾಜಕೀಯ ನಡೆ ಏನು

"ಹಿರಿಯರಾದ ಶಾಸಕ ಜಿ. ಟಿ. ದೇವೇಗೌಡರು ಪಕ್ಷಕ್ಕೆ ಬಂದರೆ, ಈ ಭಾಗದಲ್ಲಿ ಬಿಜೆಪಿಗೆ ಎಂಟತ್ತು ಸ್ಥಾನ ಗೆಲ್ಲಿಸುತ್ತಾರೆ ಎನ್ನುವುದಾದರೆ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ" ಎಂದು ಶಾಸಕ ಎಲ್. ನಾಗೇಂದ್ರ ಹೇಳಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಹೊಸದೊಂದು ಬಾಂಬ್ ಸಿಡಿಸಿದ ಶಾಸಕ‌ ಜಿಟಿ ದೇವೇಗೌಡಚುನಾವಣೆಗೆ ಸಂಬಂಧಿಸಿದಂತೆ ಹೊಸದೊಂದು ಬಾಂಬ್ ಸಿಡಿಸಿದ ಶಾಸಕ‌ ಜಿಟಿ ದೇವೇಗೌಡ

MLA L Nagendra

"ಶಾಸಕ ಜಿ. ಟಿ. ದೇವಗೌಡರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ. ಅವರ ಪುತ್ರ ಹರೀಶ್ ಗೌಡನಿಗೆ ಚಾಮರಾಜ ಟಿಕೆಟ್ ನೀಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡಿದರೇ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧನಿದ್ದೇನೆ" ಎಂದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ತಂತ್ರಕ್ಕೆ ಜೆಡಿಎಸ್ ಅತಂತ್ರ!ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ತಂತ್ರಕ್ಕೆ ಜೆಡಿಎಸ್ ಅತಂತ್ರ!

"ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ಇಂತಹ ಪಕ್ಷಕ್ಕಾಗಿ ಕ್ಷೇತ್ರ ತ್ಯಾಗಕ್ಕೂ ನಾನು ಸಿದ್ಧನಾಗುತ್ತೇನೆ" ಎಂದು ಶಾಸಕ ನಾಗೇಂದ್ರ ಹೇಳಿರುವುದು ಕುತೂಹಲ ಮೂಡಿಸಿದೆ.

"ಘಟಾನುಘಟಿ ನಾಯಕರು ಬಿಜೆಪಿಗೆ ಬರ್ತಾರೆ" ಎಂಬ ಸಹಕಾರ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿಕೆಗೆ ನಾಗೇಂದ್ರ ಪ್ರತಿಕ್ರಿಯಿಸಿ, "ಅವರು ಯಾರು ಎಂದು ಉಸ್ತುವಾರಿ ಸಚಿವರನ್ನೇ ಕೇಳಿ" ಎಂದರು.

English summary
If G. T. Deve Gowda will join BJP i am ready to sacrifice assembly seat said Mysuru Chamaraja assembly seat BJP MLA L. Nagendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X