ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ನಾನೇ : ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್ 30 : 'ನಾನೇ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್. ಆದ್ದರಿಂದ, ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು, 'ಸಮ್ಮಿಶ್ರ ಸರ್ಕಾರ ಸಂಕಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ' ಎಂದರು.

'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬುದು ಮಾಧ್ಯಮಗಳ ಸೃಷ್ಟಿ. ಯಾವೊಬ್ಬ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಕೈ ಹಾಕಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

I am troubleshooter says Former CM Siddaramaiah

'ರಾಜ್ಯಾದ್ಯಂತ ಸಮ್ಮಿಶ್ರ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಸಾಲ ಮನ್ನಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿ 5 ವರ್ಷ ನಡೆಯಲಿದೆ' ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಸಮನ್ವಯ ಸಮಿತಿ ರಚನೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಮೂರಕ್ಕೂ ಹೆಚ್ಚು ಬಾರಿ ಸಮನ್ವಯ ಸಮಿತಿ ಸಭೆ ನಡೆದಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಮಿತಿಯ ಸದಸ್ಯರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+