ಲಖನ್ ಜಾರಕಿಹೊಳಿ ಟಿಕೆಟ್ ಕೈತಪ್ಪಿರುವ ಬಗ್ಗೆ ಗೊತ್ತಿಲ್ಲ ಎಂದ ಸತೀಶ್ ಜಾರಕಿಹೊಳಿ
ಮೈಸೂರು, ನವೆಂಬರ್ 20: ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ಕೈತಪ್ಪಿದ ವಿಚಾರ ಬಿಜೆಪಿಗೆ ಸಂಬಂಧಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಲಖನ್ ಜಾರಕಿಹೊಳೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ವಿಚಾರವು ಅವರ ಪಕ್ಷಕ್ಕೆ ಬಿಟ್ಟದ್ದಾಗಿದೆ. ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ನಾವು ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವುದೊಂದೇ ಬಾಕಿ ಉಳಿದುಕೊಂಡಿದೆ. ನಮ್ಮ ಅಭ್ಯರ್ಥಿಗಳ ಪರವಾಗಿ ಈಗಾಗಲೇ ಕೆಲಸಗಳನ್ನು ಆರಂಭಿಸಲಾಗುತ್ತಿದೆ. ನಮ್ಮ ಪಕ್ಷದಲ್ಲಿ ಜನಪರ ಕೆಲಸ ಮಾಡುವವರನ್ನು ಗುರುತಿಸುವಂತಹ ಕೆಲಸಗಳು ನಡೆಯುತ್ತಿವೆ. ಆಯಾ ಭಾಗದಲ್ಲಿ ಪರಿಚಿತರಾಗಿರುವವರೇ ಅಭ್ಯರ್ಥಿಗಳಾಗಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು:
ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. "ಮೊದಲಿಗೆ ನಾವು 113 ಸ್ಥಾನಗಳನ್ನು ಗೆಲ್ಲಬೇಕಾಗಿದೆ. ಈಗ ಯಾವ ಗೊಂದಲವೂ ಬರುವುದಿಲ್ಲ. ಈಗ ದಲಿತ ಸಿಎಂಗೆ ಸಂಬಂಧಿಸಿದ ಪ್ರಶ್ನೆನೂ ಇಲ್ಲ, ಚರ್ಚೆನೂ ಬರುವುದಿಲ್ಲ. ಮೊದಲು ನಾವು 113 ಸೀಟ್ ಅನ್ನು ಬರಬೇಕು, ಆ ನಂತರ ಈ ವಿಚಾರ," ಎಂದು ಮೈಸೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳೆ ಹೇಳಿದರು.
ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಸಿದ್ದರಾಮಯ್ಯ ಚರ್ಚೆ:
ಕರ್ನಾಟಕದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಗಳ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಸಿದ್ದರಾಮಯ್ಯ ಜೊತೆಗಿನ ಸಭೆಯ ನಂತರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್‌ನಾಥ್ ಬೇಸದರದಲ್ಲೇ ಹೊರ ನಡೆದರು. ಮೈಸೂರನಿಂದ ಎಂಎಲ್‌ಸಿ ಟಿಕೆಟ್ ಬಯಸಿರುವ ಪುಷ್ಪ ಅಮರ್‌ನಾಥ್ ಜೊತೆಗೆ ಶುಕ್ರವಾರದಿಂದಲೂ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದರು. ಶನಿವಾರ ಬೆಳಿಗ್ಗೆ ಟಿಕೆಟ್ ಆಕಾಂಕ್ಷಿಗಳ ಜೊತೆ ಒನ್ ಟು ಒನ್ ಸಭೆ ಕರೆದಿದ್ದರು.












Click it and Unblock the Notifications