• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿಂದೂ ಟೆರರಿಸಂ ಎನ್ನುವುದನ್ನು ನಾನು ಕೇಳಿಯೇ ಇಲ್ಲ: ಗೋವಿಂದ್ ಕಾರಜೋಳ

By ಮೈಸೂರು ಪ್ರತಿನಿಧಿ
|

ಮೈಸೂರು, ಜನವರಿ 21: ಹಿಂದೂಗಳಲ್ಲಿ ಟೆರರಿಸಂ ಎನ್ನುವುದಿಲ್ಲ, ಹಿಂದೂ ಟೆರರಿಸಂ ಎನ್ನುವ ಪದವನ್ನೇ ನಾನು ಇದುವರೆಗೂ ಕೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಟೆರರಸ್ಟ್ ಎಂದರೆ ಅದು ಪಾಕಿಸ್ತಾನದಿಂದ ಬಂದವರು ಎಂದು ತಿಳಿದುಕೊಂಡಿದ್ದೇನೆ ಎಂದರು.

ಮಂಗಳೂರಲ್ಲಿ ಬಾಂಬ್ ಪತ್ತೆ; ಯಡಿಯೂರಪ್ಪ ಕಳಿಸಿದ ಸಂದೇಶವೇನು?

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವುದರ ಬಗ್ಗೆ ಸೂಕ್ತ ತನಿಖೆಯಾಗಲಿ. ತನಿಖಾ ಹಂತದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುವುದು ಬೇಡ ಎಂದರು.

ಸಚಿವ ಸಂಪುಟ ವಿಸ್ತರಣೆಯಿಂದ ಪ್ರಳಯ ಆಗಲ್ಲ

ಸಚಿವ ಸಂಪುಟ ವಿಸ್ತರಣೆಯಿಂದ ಪ್ರಳಯ ಆಗಲ್ಲ

"ಇಡೀ ಪ್ರಕರಣದ ಕುರಿತು ಸರಿಯಾದ ಮಾಹಿತಿ ಇಲ್ಲ, ನಿನ್ನೆ ನಾನು ದೆಹಲಿಯಲ್ಲಿದ್ದೆ. ಇಂದು ಮೈಸೂರಿಗೆ ಬಂದಿದ್ದೇನೆ. ಬಾಂಬ್ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಜಗತ್ತು ಪ್ರಳಯ ಆಗಿಬಿಡುವುದಿಲ್ಲ ಎಂದು ವಿಪಕ್ಷ ನಾಯಯಕ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಕಾರಜೋಳ ತಿರುಗೇಟು ನೀಡಿದರು.

"ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡಬೇಕು"

"ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಆದರೆ ಸಿದ್ದರಾಮಯ್ಯ ಹೇಳುವಂತೆ ಸ್ಫೋಟವೂ ಆಗುವುದಿಲ್ಲ, ಏನೂ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬುದನ್ನು ನಮ್ಮ‌ ನಾಯಕರು ನಿರ್ಧಾರ ಮಾಡುತ್ತಾರೆ" ಎಂದರು.

ಮಂಗಳೂರು: ಬಾಂಬ್ ಪತ್ತೆಯಿಂದ ಸ್ಫೋಟದವರೆಗೆ ನಡೆದಿದ್ದೇನು?

"ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಭಿನ್ನಾಭಿಪ್ರಾಯವೂ ಇಲ್ಲ" ಎಂದು ಅಭಿಪ್ರಾಯಪಟ್ಟರು.

"ಇಂದಿರಾ ಗಾಂಧಿ ಕಾಲದಲ್ಲಿಯೇ ಪೌರತ್ವಕ್ಕೆ ತಿದ್ದುಪಡಿ"

"ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿ ಅಲ್ಲಿನ ಕಿರುಕುಳಕ್ಕೆ ನೊಂದು ಬಂದವರಿಗೂ ಪೌರತ್ವ ಕೊಡಬಾರದೇ? ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವ ಕಾರಣನಕ್ಕಾಗಿ ಇಷ್ಟು ವಿರೋಧ ಮಾಡುತ್ತಿವೆ ಗೊತ್ತಿಲ್ಲ" ಎಂದು ಪ್ರಶ್ನಿಸಿದರು.

ಜವಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಕಾಲದಲ್ಲಿಯೇ ಪೌರತ್ವ ಕಾಯ್ದೆಗೆ ತಿದ್ದುಪಡಿ ಆಗಿದೆ. ಆಗ ವಿರೋಧ ಮಾಡದ ಕಾಂಗ್ರೆಸ್ ನವರು ಈಗ ಯಾಕೆ ಇಷ್ಟೊಂದು ಪ್ರತಿರೋಧ ತೋರುತ್ತಿದ್ದಾರೆ. ಅವರಿಗಾಗುವ ಕಷ್ಟವಾದರೂ ಏನು ಎಂದು ಮಾತಿನ ಚಾಟಿ ಬೀಸಿದರು.

ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಚಿಂತೆ

ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಚಿಂತೆ

"ಕಿರುಕುಳ, ಅತ್ಯಾಚಾರಕ್ಕೆ ಒಳಗಾದವರಿಗೆ ಪೌರತ್ವ ನೀಡುತ್ತಿದ್ದೇವೆ. ಜೊತೆಗೆ ಅಕ್ರಮ ವಲಸಿಗರನ್ನು ದೇಶದಿಂದ ಹೊರಕ್ಕೆ ಕಳುಹಿಸುತ್ತಿದ್ದೇವೆ. ವಲಸಿಗರು ಇಲ್ಲಿ ಇರುವುದರಿಂದ ದೇಶಕ್ಕೆ ಆರ್ಥಿಕ ಹೊರೆಯಾಗುತ್ತಿದೆ. ವಿಪಕ್ಷಗಳು ಮಾತ್ರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಅವರಿಗೆ ವೋಟ್ ಬ್ಯಾಂಕ್ ಚಿಂತೆಯಾಗಿದೆ. ಹೀಗಾಗಿ ಇಲ್ಲಿಯ ಜನರನ್ನು ದೇಶದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಇಲ್ಲಿಯೇ ನೆಲೆಸಿರುವ ಯಾರೊಬ್ಬರಿಗೂ ತೊಂದರೆ ಕೊಡುವ ಉದ್ದೇಶ ಇಲ್ಲ" ಎಂದು ಗೋವಿಂದ್ ಕಾರಜೋಳ ಹೇಳಿದರು.

English summary
"There is no terrorism in the Hindus, I have never heard the word Hindu Terrorism," said Deputy Chief Minister Govind Karajola.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X