ವಿಶ್ವನಾಥ್ ಮನವೊಲಿಸುತ್ತೇವೆ: ಸಚಿವ ಸಾ ರಾ ಮಹೇಶ್
ಮೈಸೂರು, ಜೂನ್ 4: ವಿಶ್ವನಾಥ್ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ಸಚಿವ ಸಾ ರಾ ಮಹೇಶ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿಶ್ವನಾಥ್ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಇವತ್ತು ಜೆಡಿಎಸ್ ಪಕ್ಷದ ಸಭೆ ಇದೆ. ಮೈಸೂರು ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿಗೆ ತೆರಳುತ್ತೇನೆ. ವಿಶ್ವನಾಥ್ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತನಾಡುತ್ತೇನೆ ಎಂದರು.
ಇಂದು ಸಂಜೆ ಬೆಂಗಳೂರಿನಲ್ಲಿ ಜೆಡಿಎಸ್ ಸಭೆ ಇದೆ. ಆ ಸಭೆಯಲ್ಲಿ ವಿಶ್ವನಾಥ್ ಅವರ ರಾಜೀನಾಮೆ ಬಗ್ಗೆ ಚರ್ಚೆ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕರಿಸದಂತೆ ಮನವಿ ಮಾಡುತ್ತೇವೆ. ವಿಶ್ವನಾಥ್ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ತಿಳಿಸಿದರು.

ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಮ್ಮೊಂದಿಗೆ ಬಿಜೆಪಿ ಶಾಸಕರು ಸಂಪರ್ಕದಲ್ಲಿ ಇದ್ದಾರೆ. ಆದರೆ ನಾವು ಆಪರೇಶನ್ ಮಾಡುವ ಹಂತಕ್ಕೆ ಹೋಗುವುದಿಲ್ಲ. ನಮಗೂ ಅವರಿಗೂ ಯಾವ ವ್ಯತ್ಯಾಸ ಬರುತ್ತದೆ ಎಂದರು.












Click it and Unblock the Notifications